ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 19) ಹೊಸದಾಗಿ 242 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,93,139 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,47,683 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,169 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,258 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 242 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,786 ಕ್ಕೆ ಏರಿಕೆಯಾಗಿದೆ. 12,54,786 ಸೋಂಕಿತರ ಪೈಕಿ 12,32,507 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,320 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,958 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 144, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 3, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 7, ಗದಗ 1, ಹಾಸನ 11, ಹಾವೇರಿ 1, ಕಲಬುರಗಿ 0, ಕೊಡಗು 11, ಕೋಲಾರ 0, ಕೊಪ್ಪಳ 0, ಮಂಡ್ಯ 5, ಮೈಸೂರು 5, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 14, ಉಡುಪಿ 5, ಉತ್ತರ ಕನ್ನಡ 10, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಚಾಮರಾಜನಗರ ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: ಕೊರೊನಾ ಹಿನ್ನೆಲೆ; ವಿಧಾನ ಪರಿಷತ್ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
ಇದನ್ನೂ ಓದಿ: Namma Metro: ಬೆಂಗಳೂರು ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ: ಕೊರೊನಾ ಮೊದಲಿನ ವೇಳಾಪಟ್ಟಿ