AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 213 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 134 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,920 ಕ್ಕೆ ಏರಿಕೆಯಾಗಿದೆ. 12,54,920 ಸೋಂಕಿತರ ಪೈಕಿ 12,32,752 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 213 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 20, 2021 | 6:59 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 20) ಹೊಸದಾಗಿ 213 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,93,352 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,48,053 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,174 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,096 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 134 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,54,920 ಕ್ಕೆ ಏರಿಕೆಯಾಗಿದೆ. 12,54,920 ಸೋಂಕಿತರ ಪೈಕಿ 12,32,752 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,322 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,845 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 134, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 1, ಕೊಡಗು 3, ಕೋಲಾರ 0, ಕೊಪ್ಪಳ 1, ಮಂಡ್ಯ 4, ಮೈಸೂರು 17, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 9, ಉಡುಪಿ 5, ಉತ್ತರ ಕನ್ನಡ 1, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯಲ್ಲಿ 2 ಕೊವಿಡ್ ಮರಣಗಳು ವರದಿ ಆಗಿವೆ. ರಾಮನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ರೈಲ್ವೆ ಪ್ರಯಾಣಿಕರಿಗೆ ಸಿಹಿ‌ ಸುದ್ದಿ; ಕೊರೊನಾ ಕಾರಣದಿಂದ ನಿಂತಿದ್ದ ಈ ಸೇವೆ ಮತ್ತೆ ಆರಂಭವಾಗಲಿದೆ!

ಇದನ್ನೂ ಓದಿ: ಕೊರೊನಾ ಹಿನ್ನೆಲೆ; ವಿಧಾನ ಪರಿಷತ್ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ