ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 3) ಹೊಸದಾಗಿ 254 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,89,014 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,42,588 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,091 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 151 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,257 ಕ್ಕೆ ಏರಿಕೆಯಾಗಿದೆ. 12,52,257 ಸೋಂಕಿತರ ಪೈಕಿ 12,29,570 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,285 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,401 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 151, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 0, ಕೊಪ್ಪಳ 0, ಮಂಡ್ಯ 6, ಮೈಸೂರು 19, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 11, ಉಡುಪಿ 11, ಉತ್ತರ ಕನ್ನಡ 12, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 03/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/RVplsZuxwO
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/POPmEsyxy6
— K’taka Health Dept (@DHFWKA) November 3, 2021
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: Covaxin: ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ
ಇದನ್ನೂ ಓದಿ: ಶೂನ್ಯದತ್ತ ಕೊರೊನಾ! ನವೆಂಬರ್ 8ರಿಂದ ರಾಜ್ಯದಲ್ಲಿ ಅಂಗನವಾಡಿ ಓಪನ್; ಸರ್ಕಾರದಿಂದ ಗೈಡ್ಲೈನ್ಸ್ ಬಿಡುಗಡೆ