AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 261 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 157 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,414 ಕ್ಕೆ ಏರಿಕೆಯಾಗಿದೆ. 12,52,414 ಸೋಂಕಿತರ ಪೈಕಿ 12,29,740 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 261 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 04, 2021 | 7:13 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 4) ಹೊಸದಾಗಿ 261 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,89,275 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,42,884 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,095 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,267 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 157 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,414 ಕ್ಕೆ ಏರಿಕೆಯಾಗಿದೆ. 12,52,414 ಸೋಂಕಿತರ ಪೈಕಿ 12,29,740 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,292 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,381 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 157, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 16, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 7, ಹಾವೇರಿ 0, ಕಲಬುರಗಿ 2, ಕೊಡಗು 9, ಕೋಲಾರ 5, ಕೊಪ್ಪಳ 0, ಮಂಡ್ಯ 4, ಮೈಸೂರು 13, ರಾಯಚೂರು 0, ರಾಮನಗರ 1, ಶಿವಮೊಗ್ಗ 6, ತುಮಕೂರು 15, ಉಡುಪಿ 6, ಉತ್ತರ ಕನ್ನಡ 4, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ಕೊವಿಡ್ ಸೋಂಕಿತರಿಗೆ ಮೆರ್ಕ್​ ಮಾತ್ರೆ ನೀಡಲು ಬ್ರಿಟನ್ ಒಪ್ಪಿಗೆ

ಇದನ್ನೂ ಓದಿ: ಯುರೋಪ್​​ನಲ್ಲಿ ಫೆಬ್ರವರಿ ವೇಳೆಗೆ 5 ಲಕ್ಷ ಕೊವಿಡ್ ಸಾವು ಸಂಭವಿಸಬಹುದು: ವಿಶ್ವ ಆರೋಗ್ಯ ಸಂಸ್ಥೆ

Follow Us
TV9 Web
TV9 Web

TV9 Kannada

Read More
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!