ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 4) ಹೊಸದಾಗಿ 261 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,89,275 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,42,884 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,095 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,267 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 157 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,414 ಕ್ಕೆ ಏರಿಕೆಯಾಗಿದೆ. 12,52,414 ಸೋಂಕಿತರ ಪೈಕಿ 12,29,740 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,292 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,381 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 157, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 2, ದಕ್ಷಿಣ ಕನ್ನಡ 16, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 7, ಹಾವೇರಿ 0, ಕಲಬುರಗಿ 2, ಕೊಡಗು 9, ಕೋಲಾರ 5, ಕೊಪ್ಪಳ 0, ಮಂಡ್ಯ 4, ಮೈಸೂರು 13, ರಾಯಚೂರು 0, ರಾಮನಗರ 1, ಶಿವಮೊಗ್ಗ 6, ತುಮಕೂರು 15, ಉಡುಪಿ 6, ಉತ್ತರ ಕನ್ನಡ 4, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 04/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bUNN9ldg3s
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/BPb8BSKPfD
— K’taka Health Dept (@DHFWKA) November 4, 2021
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯಲ್ಲಿ ಕೊರೊನಾದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: ಕೊವಿಡ್ ಸೋಂಕಿತರಿಗೆ ಮೆರ್ಕ್ ಮಾತ್ರೆ ನೀಡಲು ಬ್ರಿಟನ್ ಒಪ್ಪಿಗೆ
ಇದನ್ನೂ ಓದಿ: ಯುರೋಪ್ನಲ್ಲಿ ಫೆಬ್ರವರಿ ವೇಳೆಗೆ 5 ಲಕ್ಷ ಕೊವಿಡ್ ಸಾವು ಸಂಭವಿಸಬಹುದು: ವಿಶ್ವ ಆರೋಗ್ಯ ಸಂಸ್ಥೆ