Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 239 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 151 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,831 ಕ್ಕೆ ಏರಿಕೆಯಾಗಿದೆ. 12,52,831 ಸೋಂಕಿತರ ಪೈಕಿ 12,30,170 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 7) ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,89,952 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,43,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,112 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,002 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 151 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,831 ಕ್ಕೆ ಏರಿಕೆಯಾಗಿದೆ. 12,52,831 ಸೋಂಕಿತರ ಪೈಕಿ 12,30,170 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,295 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,365 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 151, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 6, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 2, ಕೊಪ್ಪಳ 0, ಮಂಡ್ಯ 5, ಮೈಸೂರು 17, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 4, ಉಡುಪಿ 5, ಉತ್ತರ ಕನ್ನಡ 12, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 07/11/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/7sqRBqEDCM
@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/TTLC6NhGH8
— K’taka Health Dept (@DHFWKA) November 7, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕೂಡ ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.
ಇದನ್ನೂ ಓದಿ: Pfizer Pill: ಫೈಜರ್ ಕಂಪೆನಿಯ ಮಾತ್ರೆ ಕೊರೊನಾ ವಿರುದ್ಧ ಪರಿಣಾಮಕಾರಿ ಎಂದ ಸಂಸ್ಥೆ
ಇದನ್ನೂ ಓದಿ: ಕೊವಿಡ್ ಲಸಿಕೆ ವಿತರಣೆ, ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ನಿರ್ಧಾರವನ್ನು ಶ್ಲಾಘಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್