Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 332 ಜನರಿಗೆ ಕೊರೊನಾ ದೃಢ; 11 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 145 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,604 ಕ್ಕೆ ಏರಿಕೆಯಾಗಿದೆ. 12,48,604 ಸೋಂಕಿತರ ಪೈಕಿ 12,25,810 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 332 ಜನರಿಗೆ ಕೊರೊನಾ ದೃಢ; 11 ಮಂದಿ ಸಾವು
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 12) ಹೊಸದಾಗಿ 332 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,81,732 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,34,085 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,906 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,712 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 145 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,604 ಕ್ಕೆ ಏರಿಕೆಯಾಗಿದೆ. 12,48,604 ಸೋಂಕಿತರ ಪೈಕಿ 12,25,810 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,198 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,595 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 145, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 7, ಚಿತ್ರದುರ್ಗ 1, ದಕ್ಷಿಣ ಕನ್ನಡ 27, ದಾವಣಗೆರೆ 2, ಧಾರವಾಡ 4, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 1, ಕೊಪ್ಪಳ 0, ಮಂಡ್ಯ 8, ಮೈಸೂರು 39, ರಾಯಚೂರು 0, ರಾಮನಗರ 3, ಶಿವಮೊಗ್ಗ 6, ತುಮಕೂರು 12, ಉಡುಪಿ 17, ಉತ್ತರ ಕನ್ನಡ 12, ವಿಜಯಪುರ 5, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ ಬಗ್ಗೆ ನಿರ್ಲಕ್ಷ್ಯ ಬೇಡ; ದಸರಾ, ದೀಪಾವಳಿ ಹಬ್ಬದ ನಂತರ ಕಾದಿದೆ ಅಪಾಯ!

ಇದನ್ನೂ ಓದಿ: Coronavirus cases in India ಭಾರತದಲ್ಲಿ14,313 ಹೊಸ ಕೊವಿಡ್ ಪ್ರಕರಣ ಪತ್ತೆ,181 ಮಂದಿ ಸಾವು

Read Full Article

Click on your DTH Provider to Add TV9 Kannada