Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 357 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು

| Updated By: ganapathi bhat

Updated on: Oct 13, 2021 | 7:39 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,744 ಕ್ಕೆ ಏರಿಕೆಯಾಗಿದೆ. 12,48,744 ಸೋಂಕಿತರ ಪೈಕಿ 12,25,967 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 357 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 13) ಹೊಸದಾಗಿ 357 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,82,089 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,34,523 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,916 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,621 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,744 ಕ್ಕೆ ಏರಿಕೆಯಾಗಿದೆ. 12,48,744 ಸೋಂಕಿತರ ಪೈಕಿ 12,25,967 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,203 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,573 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 140, ಬೀದರ್ 2, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ ಕನ್ನಡ 35, ದಾವಣಗೆರೆ 1, ಧಾರವಾಡ 2, ಗದಗ 1, ಹಾಸನ 26, ಹಾವೇರಿ 0, ಕಲಬುರಗಿ 0, ಕೊಡಗು 9, ಕೋಲಾರ 8, ಕೊಪ್ಪಳ 1, ಮಂಡ್ಯ 9, ಮೈಸೂರು 21, ರಾಯಚೂರು 2, ರಾಮನಗರ 2, ಶಿವಮೊಗ್ಗ 9, ತುಮಕೂರು 27, ಉಡುಪಿ 16, ಉತ್ತರ ಕನ್ನಡ 13, ವಿಜಯಪುರ 6, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸರ್ಟಿಫಿಕೇಶನ್ ಸಿಕ್ಕ ತಕ್ಷಣ ಮಕ್ಕಳಿಗೆ ಕೊರೊನಾ ಲಸಿಕೆ: ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಇದನ್ನೂ ಓದಿ: ಪುಣೆಯಲ್ಲಿ ಕೊವಿಡ್​​ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬೆನ್ನು ಮೂಳೆಯ ಕ್ಷಯರೋಗಕ್ಕೆ ಕಾರಣವಾಗುವ ಶಿಲೀಂಧ್ರ ಸೋಂಕು ಪತ್ತೆ

Published On - 7:37 pm, Wed, 13 October 21