Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 470 ಜನರಿಗೆ ಕೊರೊನಾ ದೃಢ; 9 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 232 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,124 ಕ್ಕೆ ಏರಿಕೆಯಾಗಿದೆ. 12,49,124 ಸೋಂಕಿತರ ಪೈಕಿ 12,26,171 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 470 ಜನರಿಗೆ ಕೊರೊನಾ ದೃಢ; 9 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Oct 15, 2021 | 6:58 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 15) ಹೊಸದಾಗಿ 470 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,82,869 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,238 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 9 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,931 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,671 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 232 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,124 ಕ್ಕೆ ಏರಿಕೆಯಾಗಿದೆ. 12,49,124 ಸೋಂಕಿತರ ಪೈಕಿ 12,26,171 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,206 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,746 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 232, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 8, ಚಿತ್ರದುರ್ಗ 3, ದಕ್ಷಿಣ ಕನ್ನಡ 36, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 16, ಹಾವೇರಿ 0, ಕಲಬುರಗಿ 0, ಕೊಡಗು 22, ಕೋಲಾರ 9, ಕೊಪ್ಪಳ 0, ಮಂಡ್ಯ 16, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 4, ತುಮಕೂರು 16, ಉಡುಪಿ 14, ಉತ್ತರ ಕನ್ನಡ 11, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 1 ಮಂದಿ ಮೃತಪಟ್ಟಿದ್ದಾರೆ. ರಾಮನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ಉಡುಪಿ, ದಾವಣಗೆರೆ, ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ದಸರಾ ಬಳಿಕ ಕೊರೊನಾ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ; ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ‘ಡೆಲ್ಟಾ ರೂಪಾಂತರಿಯಿಂದಾಗಿ ದೆಹಲಿಯಲ್ಲಿ ಉಂಟಾದ ಕೊವಿಡ್ 2ನೇ ಅಲೆ ಹರ್ಡ್ ಇಮ್ಯುನಿಟಿಗೆ ಇರುವ ಸವಾಲು ಎತ್ತಿ ತೋರಿಸುತ್ತಿದೆ’