Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 326 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 173 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,418 ಕ್ಕೆ ಏರಿಕೆಯಾಗಿದೆ. 12,49,418 ಸೋಂಕಿತರ ಪೈಕಿ 12,26,390 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 326 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 17) ಹೊಸದಾಗಿ 326 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,459 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,36,039 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,941 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,450 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 173 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,418 ಕ್ಕೆ ಏರಿಕೆಯಾಗಿದೆ. 12,49,418 ಸೋಂಕಿತರ ಪೈಕಿ 12,26,390 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,210 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,817 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 173, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 22, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 1, ಕೊಡಗು 8, ಕೋಲಾರ 5, ಕೊಪ್ಪಳ 0, ಮಂಡ್ಯ 4, ಮೈಸೂರು 42, ರಾಯಚೂರು 1, ರಾಮನಗರ 0, ಶಿವಮೊಗ್ಗ 5, ತುಮಕೂರು 17, ಉಡುಪಿ 12, ಉತ್ತರ ಕನ್ನಡ 4, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಮೈಸೂರು ಜಿಲ್ಲೆಯಲ್ಲಿ ಕೊರೊನಾದಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಇಂದು ಮತ್ತೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ.

ಇದನ್ನೂ ಓದಿ: Coronavirus cases in India ದೇಶದಲ್ಲಿ 14,146 ಹೊಸ ಕೊವಿಡ್ ಪ್ರಕರಣ ಪತ್ತೆ, 144 ಮಂದಿ ಸಾವು

ಇದನ್ನೂ ಓದಿ: Covid 19 Vaccination Anthem: ಕೊವಿಡ್​ 19 ಲಸಿಕೆ ಗೀತೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ; ಕೈಲಾಶ್​ ಖೇರ್​ ಗಾಯನ

Click on your DTH Provider to Add TV9 Kannada