AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 214 ಜನರಿಗೆ ಕೊರೊನಾ ದೃಢ; 12 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 83 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,501 ಕ್ಕೆ ಏರಿಕೆಯಾಗಿದೆ. 12,49,501 ಸೋಂಕಿತರ ಪೈಕಿ 12,26,541 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 214 ಜನರಿಗೆ ಕೊರೊನಾ ದೃಢ; 12 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 18, 2021 | 11:02 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 18) ಹೊಸದಾಗಿ 214 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,673 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,36,527 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 12 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,953 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,164 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 83 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,501 ಕ್ಕೆ ಏರಿಕೆಯಾಗಿದೆ. 12,49,501 ಸೋಂಕಿತರ ಪೈಕಿ 12,26,541 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,214 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,745 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 83, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 22, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 2, ಕೊಡಗು 7, ಕೋಲಾರ 5, ಕೊಪ್ಪಳ 0, ಮಂಡ್ಯ 6, ಮೈಸೂರು 27, ರಾಯಚೂರು 0, ರಾಮನಗರ 0, ಶಿವಮೊಗ್ಗ 13, ತುಮಕೂರು 14, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾದಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ತುಮಕೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ 100 ಕ್ಕಿಂತ ಕಡಿಮೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆದರೂ ಎಚ್ಚರ ತಪ್ಪುವಂತಿಲ್ಲ; ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸೂಚನೆಗಳಿವು

ಇದನ್ನೂ ಓದಿ: Coronavirus Cases in India: 230 ದಿನಗಳಲ್ಲೇ ಅತಿಕಡಿಮೆ ಕೊರೊನಾ ಸೋಂಕಿನ ಕೇಸ್​ಗಳು ದಾಖಲು; ದೇಶದಲ್ಲಿ ತಗ್ಗುತ್ತಿದೆ ಸಾಂಕ್ರಾಮಿಕದ ಅಬ್ಬರ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?