Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 636 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 245 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,46,896 ಕ್ಕೆ ಏರಿಕೆಯಾಗಿದೆ. 12,46,896 ಸೋಂಕಿತರ ಪೈಕಿ 12,23,069 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 2) ಹೊಸದಾಗಿ 636 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,77,225 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,27,029 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,811 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 12,356 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 245 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,46,896 ಕ್ಕೆ ಏರಿಕೆಯಾಗಿದೆ. 12,46,896 ಸೋಂಕಿತರ ಪೈಕಿ 12,23,069 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,161 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,665 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 245, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 20, ಚಿತ್ರದುರ್ಗ 4, ದಕ್ಷಿಣ ಕನ್ನಡ 100, ದಾವಣಗೆರೆ 2, ಧಾರವಾಡ 3, ಗದಗ 0, ಹಾಸನ 44, ಹಾವೇರಿ 1, ಕಲಬುರಗಿ 0, ಕೊಡಗು 28, ಕೋಲಾರ 7, ಕೊಪ್ಪಳ 3, ಮಂಡ್ಯ 13, ಮೈಸೂರು 44, ರಾಯಚೂರು 1, ರಾಮನಗರ 2, ಶಿವಮೊಗ್ಗ 22, ತುಮಕೂರು 30, ಉಡುಪಿ 25, ಉತ್ತರ ಕನ್ನಡ 14, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 02/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/Bq4kzpmdAD @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/E0fEHVrRJK
— K’taka Health Dept (@DHFWKA) October 2, 2021
ಕೊರೊನಾದಿಂದ ಮೃತಪಟ್ಟವರ ವಿವರ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಒಟ್ಟಾರೆ ಕೇವಲ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ ಕೊರೊನಾದಿಂದ ಮರಣಿಸಿರುವವರ ಸಂಖ್ಯೆ ಇಂದು ಇಳಿಕೆಯಾಗಿದೆ.
ಇದನ್ನೂ ಓದಿ: ಭಾರತದಲ್ಲಿ 90 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿಕೆ; ಇನ್ನು 92 ದಿನದಲ್ಲಿ 99 ಕೋಟಿ ಡೋಸ್ ಲಸಿಕೆ ನೀಡಿಕೆ ಸಾಧ್ಯವೇ?
ಇದನ್ನೂ ಓದಿ: ಕೊವಿಡ್ ಬಳಿಕ ಕುಟುಂಬಗಳ ಸಾಮೂಹಿಕ ಆತ್ಮಹತ್ಯೆ ವಿಚಾರ: ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದ ಸಿಎಂ ಬೊಮ್ಮಾಯಿ
Published On - 7:48 pm, Sat, 2 October 21