Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 462 ಜನರಿಗೆ ಕೊರೊನಾ ದೃಢ; 9 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 253 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,915 ಕ್ಕೆ ಏರಿಕೆಯಾಗಿದೆ. 12,49,915 ಸೋಂಕಿತರ ಪೈಕಿ 12,26,929 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 462 ಜನರಿಗೆ ಕೊರೊನಾ ದೃಢ; 9 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Oct 20, 2021 | 7:27 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 20) ಹೊಸದಾಗಿ 462 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,84,484 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,37,405 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 9 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,976 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,074 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 253 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,915 ಕ್ಕೆ ಏರಿಕೆಯಾಗಿದೆ. 12,49,915 ಸೋಂಕಿತರ ಪೈಕಿ 12,26,929 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,225 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,760 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 253, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 29, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 19, ಹಾವೇರಿ 0, ಕಲಬುರಗಿ 2, ಕೊಡಗು 12, ಕೋಲಾರ 4, ಕೊಪ್ಪಳ 1, ಮಂಡ್ಯ 10, ಮೈಸೂರು 43, ರಾಯಚೂರು 0, ರಾಮನಗರ 1, ಶಿವಮೊಗ್ಗ 9, ತುಮಕೂರು 32, ಉಡುಪಿ 15, ಉತ್ತರ ಕನ್ನಡ 1, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ. ಬೀದರ್, ಧಾರವಾಡ ಮತ್ತು ಮೈಸೂರು ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

ಇದನ್ನೂ ಓದಿ: ಕೊರೊನಾ ಬಹುತೇಕ ಶೂನ್ಯ, ಮಾಸ್ಕ್ ಹಾಕದಿದ್ದರೆ ಇನ್ನು ಮುಂದೆ ಬಿಬಿಎಂಪಿ ದಂಡ ವಸೂಲಿ ಮಾಡುವುದಿಲ್ಲ!

ಇದನ್ನೂ ಓದಿ: Coronavirus ಭಾರತದಲ್ಲಿ ಕೊವಿಡ್ ಸ್ಥಳೀಯ ಹಂತವನ್ನು ಪ್ರವೇಶಿಸಿದೆ ಎಂದ ತಜ್ಞರು

ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ಮಿಡಲ್ ಸ್ಟಂಪ್... ಮೊದಲ ಇನಿಂಗ್ಸ್​ನ ಹೀರೋನ ಝೀರೋ ಮಾಡಿದ ಬುಮ್ರಾ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್