Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 378 ಜನರಿಗೆ ಕೊರೊನಾ ದೃಢ; 11 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 378 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,320 ಕ್ಕೆ ಏರಿಕೆಯಾಗಿದೆ. 12,50,320 ಸೋಂಕಿತರ ಪೈಕಿ 12,27,388 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 378 ಜನರಿಗೆ ಕೊರೊನಾ ದೃಢ; 11 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Oct 22, 2021 | 8:10 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 22) ಹೊಸದಾಗಿ 378 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,227 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,38,312 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,995 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,891 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 378 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,320 ಕ್ಕೆ ಏರಿಕೆಯಾಗಿದೆ. 12,50,320 ಸೋಂಕಿತರ ಪೈಕಿ 12,27,388 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,236 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,695 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 195, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 24, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 12, ಕೋಲಾರ 6, ಕೊಪ್ಪಳ 0, ಮಂಡ್ಯ 1, ಮೈಸೂರು 23, ರಾಯಚೂರು 1, ರಾಮನಗರ 0, ಶಿವಮೊಗ್ಗ 15, ತುಮಕೂರು 23, ಉಡುಪಿ 14, ಉತ್ತರ ಕನ್ನಡ 8, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ದಾವಣಗೆರೆ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

ಇದನ್ನೂ ಓದಿ: ಶಾಲೆ ಆರಂಭಕ್ಕೂ ಮುನ್ನ ಹಾಗೂ ನಂತರ ಮಕ್ಕಳನ್ನು ಹೇಗೆ ಸಜ್ಜುಗೊಳಿಸಬೇಕು? ತಜ್ಞರ ಸಲಹೆ ಇಲ್ಲಿದೆ

ಇದನ್ನೂ ಓದಿ: PM Modi Speech: ಭಾರತ ಕೊರೊನಾ ವಿರುದ್ಧ ಹೋರಾಡಲು ಸಾಧ್ಯವೇ ಎಂಬ ಪ್ರಶ್ನೆಗೆ 100 ಕೋಟಿ ಲಸಿಕೆ ನೀಡಿಕೆ ಉತ್ತರ ನೀಡಿದೆ; ಪ್ರಧಾನಿ ಮೋದಿ

Published On - 8:09 pm, Fri, 22 October 21

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ