ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 22) ಹೊಸದಾಗಿ 378 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,227 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,38,312 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,995 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,891 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 378 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,320 ಕ್ಕೆ ಏರಿಕೆಯಾಗಿದೆ. 12,50,320 ಸೋಂಕಿತರ ಪೈಕಿ 12,27,388 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,236 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,695 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 195, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 24, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 12, ಕೋಲಾರ 6, ಕೊಪ್ಪಳ 0, ಮಂಡ್ಯ 1, ಮೈಸೂರು 23, ರಾಯಚೂರು 1, ರಾಮನಗರ 0, ಶಿವಮೊಗ್ಗ 15, ತುಮಕೂರು 23, ಉಡುಪಿ 14, ಉತ್ತರ ಕನ್ನಡ 8, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 22/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/pvK9A3bRFN @cmofKarnataka @mla_sudhakar @Comm_dhfwka @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/iANtVN9V0m
— K’taka Health Dept (@DHFWKA) October 22, 2021
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ದಾವಣಗೆರೆ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.
ಇದನ್ನೂ ಓದಿ: ಶಾಲೆ ಆರಂಭಕ್ಕೂ ಮುನ್ನ ಹಾಗೂ ನಂತರ ಮಕ್ಕಳನ್ನು ಹೇಗೆ ಸಜ್ಜುಗೊಳಿಸಬೇಕು? ತಜ್ಞರ ಸಲಹೆ ಇಲ್ಲಿದೆ
Published On - 8:09 pm, Fri, 22 October 21