Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 371 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 193 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,513 ಕ್ಕೆ ಏರಿಕೆಯಾಗಿದೆ. 12,50,513 ಸೋಂಕಿತರ ಪೈಕಿ 12,27,518 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 371 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 23) ಹೊಸದಾಗಿ 371 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,598 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,38,653 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,002 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,914 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 193 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,513 ಕ್ಕೆ ಏರಿಕೆಯಾಗಿದೆ. 12,50,513 ಸೋಂಕಿತರ ಪೈಕಿ 12,27,518 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,240 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,754 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 193, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 34, ದಾವಣಗೆರೆ 1, ಧಾರವಾಡ 1, ಗದಗ 0, ಹಾಸನ 23, ಹಾವೇರಿ 1, ಕಲಬುರಗಿ 4, ಕೊಡಗು 2, ಕೋಲಾರ 4, ಕೊಪ್ಪಳ 0, ಮಂಡ್ಯ 4, ಮೈಸೂರು 25, ರಾಯಚೂರು 0, ರಾಮನಗರ 1, ಶಿವಮೊಗ್ಗ 2, ತುಮಕೂರು 23, ಉಡುಪಿ 12, ಉತ್ತರ ಕನ್ನಡ 10, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಕೋಲಾರ, ತುಮಕೂರು ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

ಇದನ್ನೂ ಓದಿ: Coronavirus cases in India: 24ಗಂಟೆಯಲ್ಲಿ 16,326 ಹೊಸ ಕೊರೊನಾ ಪ್ರಕರಣಗಳು ಪತ್ತೆ; 666 ಮಂದಿ ಸಾವು

ಇದನ್ನೂ ಓದಿ: Narendra Modi: ಭಾರತದ 7 ಕೊವಿಡ್ ಲಸಿಕೆ ಉತ್ಪಾದಕರ ಜೊತೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

Click on your DTH Provider to Add TV9 Kannada