Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 388 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 194 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,707 ಕ್ಕೆ ಏರಿಕೆಯಾಗಿದೆ. 12,50,707 ಸೋಂಕಿತರ ಪೈಕಿ 12,27,966 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 388 ಜನರಿಗೆ ಕೊರೊನಾ ದೃಢ; 5 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Oct 24, 2021 | 8:05 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 24) ಹೊಸದಾಗಿ 388 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,986 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,39,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,007 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,711 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 194 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,707 ಕ್ಕೆ ಏರಿಕೆಯಾಗಿದೆ. 12,50,707 ಸೋಂಕಿತರ ಪೈಕಿ 12,27,966 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,244 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,496 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 194, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 7, ಚಿತ್ರದುರ್ಗ 4, ದಕ್ಷಿಣ ಕನ್ನಡ 34, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 25, ಹಾವೇರಿ 0, ಕಲಬುರಗಿ 0, ಕೊಡಗು 6, ಕೋಲಾರ 5, ಕೊಪ್ಪಳ 0, ಮಂಡ್ಯ 5, ಮೈಸೂರು 23, ರಾಯಚೂರು 0, ರಾಮನಗರ 3, ಶಿವಮೊಗ್ಗ 12, ತುಮಕೂರು 37, ಉಡುಪಿ 4, ಉತ್ತರ ಕನ್ನಡ 10, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕೊವಿಡ್ 19 ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದೆ. ಬೆಂಗಳೂರು, ತುಮಕೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಕೊವಿಡ್​ನಿಂದ ಮರಣ ಸಂಭವಿಸಿಲ್ಲ.

ಇದನ್ನೂ ಓದಿ: ಆತಂಕ ಶುರು! ವಿದೇಶಗಳಲ್ಲಿ ಹೊಸ ತಳಿಯ ಕೊರೊನಾ ವೈರಸ್ ಪತ್ತೆ

ಇದನ್ನೂ ಓದಿ: Narendra Modi: ಭಾರತದ 7 ಕೊವಿಡ್ ಲಸಿಕೆ ಉತ್ಪಾದಕರ ಜೊತೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?