ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 30) ಹೊಸದಾಗಿ 347 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,88,041 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,41,233 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,071 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,708 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 166 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,51,735 ಕ್ಕೆ ಏರಿಕೆಯಾಗಿದೆ. 12,51,735 ಸೋಂಕಿತರ ಪೈಕಿ 12,28,855 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,274 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,605 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 2, ಚಿತ್ರದುರ್ಗ 1, ದಕ್ಷಿಣ ಕನ್ನಡ 21, ದಾವಣಗೆರೆ 4, ಧಾರವಾಡ 1, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 1, ಕೊಡಗು 9, ಕೋಲಾರ 3, ಕೊಪ್ಪಳ 0, ಮಂಡ್ಯ 8, ಮೈಸೂರು 44, ರಾಯಚೂರು 0, ರಾಮನಗರ 1, ಶಿವಮೊಗ್ಗ 9, ತುಮಕೂರು 19, ಉಡುಪಿ 14, ಉತ್ತರ ಕನ್ನಡ 14, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 30/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/ueBRFsYHSz @cmofKarnataka @mla_sudhakar @Comm_dhfwka @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/whUp4eZ76U
— K’taka Health Dept (@DHFWKA) October 30, 2021
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ದಾವಣಗೆರೆ, ಹಾಸನ, ಹಾವೇರಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಪಾಕ್ ಕ್ರಿಕೆಟ್ ತಂಡದ ಮೂವರು ಕ್ರಿಕೆಟರ್ಸ್ಗೆ ಕೊರೊನಾ ಸೋಂಕು! ಮಂಡಳಿ ಅಧಿಕೃತ ಮಾಹಿತಿ
ಇದನ್ನೂ ಓದಿ: ಚೀನಾ ಆಯ್ತು ಈಗ ರಷ್ಯಾ: ಮಿತಿಮೀರಿದ ಕೊರೊನಾ ಸೋಂಕು, ಮಾಸ್ಕೋದಲ್ಲಿ 11 ದಿನ ಲಾಕ್ಡೌನ್