AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 292 ಜನರಿಗೆ ಕೊರೊನಾ ದೃಢ; 11 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 137 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,51,872 ಕ್ಕೆ ಏರಿಕೆಯಾಗಿದೆ. 12,51,872 ಸೋಂಕಿತರ ಪೈಕಿ 12,29,059 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 292 ಜನರಿಗೆ ಕೊರೊನಾ ದೃಢ; 11 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 31, 2021 | 7:48 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 31) ಹೊಸದಾಗಿ 292 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,88,333 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,41,578 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,082 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,644 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 137 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,51,872 ಕ್ಕೆ ಏರಿಕೆಯಾಗಿದೆ. 12,51,872 ಸೋಂಕಿತರ ಪೈಕಿ 12,29,059 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,281 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,531 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 137, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 3, ದಕ್ಷಿಣ ಕನ್ನಡ 24, ದಾವಣಗೆರೆ 2, ಧಾರವಾಡ 0, ಗದಗ 0, ಹಾಸನ 26, ಹಾವೇರಿ 1, ಕಲಬುರಗಿ 3, ಕೊಡಗು 11, ಕೋಲಾರ 2, ಕೊಪ್ಪಳ 0, ಮಂಡ್ಯ 8, ಮೈಸೂರು 33, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 17, ಉಡುಪಿ 2, ಉತ್ತರ ಕನ್ನಡ 6, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 2 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

ಇದನ್ನೂ ಓದಿ: 2022ರ ಅಂತ್ಯದ ಹೊತ್ತಿಗೆ 5ಬಿಲಿಯನ್​ ಡೋಸ್​ ಕೊರೊನಾ ಲಸಿಕೆ ಉತ್ಪಾದನೆ: ಜಿ20 ನಾಯಕರನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು