AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ 397 ಮಂದಿಗೆ ಕೊರೊನಾ ದೃಢ; ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ

ಬೆಂಗಳೂರಿನಲ್ಲಿ ಇಂದು ಒಂದೇ ದಿನ 166 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,258 ಕ್ಕೆ ಏರಿಕೆಯಾಗಿದೆ. 12,47,258 ಸೋಂಕಿತರ ಪೈಕಿ 12,23,448 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ 397 ಮಂದಿಗೆ ಕೊರೊನಾ ದೃಢ; ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Oct 04, 2021 | 8:02 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 4) ಹೊಸದಾಗಿ 397 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,78,286 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,28,433 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,832 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,992 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 166 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,258 ಕ್ಕೆ ಏರಿಕೆಯಾಗಿದೆ. 12,47,258 ಸೋಂಕಿತರ ಪೈಕಿ 12,23,448 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,169 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,640 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 16, ಚಿತ್ರದುರ್ಗ 2, ದಕ್ಷಿಣ ಕನ್ನಡ 45, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 33, ಹಾವೇರಿ 1, ಕಲಬುರಗಿ 1, ಕೊಡಗು 25, ಕೋಲಾರ 11, ಕೊಪ್ಪಳ 0, ಮಂಡ್ಯ 11, ಮೈಸೂರು 40, ರಾಯಚೂರು 1, ರಾಮನಗರ 0, ಶಿವಮೊಗ್ಗ 12, ತುಮಕೂರು 7, ಉಡುಪಿ 6, ಉತ್ತರ ಕನ್ನಡ 12, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಬಲಿಯಾದ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ

ಇದನ್ನೂ ಓದಿ: ‘ಕೊರೊನಾ ಹಿನ್ನೆಲೆ ಸರಳವಾಗಿ ದಸರಾ ಆಚರಿಸೋಣ’ ಮೈಸೂರು ದಸರಾ ಆಹ್ವಾನ ಪತ್ರಿಕೆಯಲ್ಲಿ ಸಿಎಂ ಸಂದೇಶ

Published On - 7:26 pm, Mon, 4 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ