Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 523 ಜನರಿಗೆ ಕೊರೊನಾ ದೃಢ; 14 ಮಂದಿ ಸಾವು

| Updated By: ganapathi bhat

Updated on: Oct 05, 2021 | 8:20 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 201 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,459 ಕ್ಕೆ ಏರಿಕೆಯಾಗಿದೆ. 12,47,459 ಸೋಂಕಿತರ ಪೈಕಿ 12,23,686 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 523 ಜನರಿಗೆ ಕೊರೊನಾ ದೃಢ; 14 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 4) ಹೊಸದಾಗಿ 523 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,78,808 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,29,008 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 14 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,845 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,926 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 201 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,459 ಕ್ಕೆ ಏರಿಕೆಯಾಗಿದೆ. 12,47,459 ಸೋಂಕಿತರ ಪೈಕಿ 12,23,686 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,173 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,599 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 7, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 201, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 48, ಚಿತ್ರದುರ್ಗ 9, ದಕ್ಷಿಣ ಕನ್ನಡ 55, ದಾವಣಗೆರೆ 2, ಧಾರವಾಡ 5, ಗದಗ 0, ಹಾಸನ 23, ಹಾವೇರಿ 0, ಕಲಬುರಗಿ 1, ಕೊಡಗು 7, ಕೋಲಾರ 5, ಕೊಪ್ಪಳ 0, ಮಂಡ್ಯ 11, ಮೈಸೂರು 33, ರಾಯಚೂರು 1, ರಾಮನಗರ 5, ಶಿವಮೊಗ್ಗ 5, ತುಮಕೂರು 37, ಉಡುಪಿ 19, ಉತ್ತರ ಕನ್ನಡ 26, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ 3 ಮಂದಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 2 ಜನ ಸಾವನ್ನಪ್ಪಿದ್ದಾರೆ. ಬೆಳಗಾವಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಗದಗ, ತುಮಕೂರು ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಬಲಿಯಾದ ಕುಟುಂಬಕ್ಕೆ ₹50 ಸಾವಿರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಅನುಮೋದನೆ

ಇದನ್ನೂ ಓದಿ: Covid 3rd Wave: ಹಬ್ಬಗಳಿಂದ 2 ವಾರ ಮೊದಲೇ ಭಾರತಕ್ಕೆ ಅಪ್ಪಳಿಸುತ್ತಾ ಕೊವಿಡ್ 3ನೇ ಅಲೆ?