Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 442 ಜನರಿಗೆ ಕೊರೊನಾ ದೃಢ; 7 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 166 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,830 ಕ್ಕೆ ಏರಿಕೆಯಾಗಿದೆ. 12,47,830 ಸೋಂಕಿತರ ಪೈಕಿ 12,24,089 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 7) ಹೊಸದಾಗಿ 442 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,79,773 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,30,264 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,861 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,619 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 166 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,830 ಕ್ಕೆ ಏರಿಕೆಯಾಗಿದೆ. 12,47,830 ಸೋಂಕಿತರ ಪೈಕಿ 12,24,089 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,177 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,563 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 2, ದಕ್ಷಿಣ ಕನ್ನಡ 43, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 35, ಹಾವೇರಿ 2, ಕಲಬುರಗಿ 2, ಕೊಡಗು 12, ಕೋಲಾರ 13, ಕೊಪ್ಪಳ 0, ಮಂಡ್ಯ 15, ಮೈಸೂರು 31, ರಾಯಚೂರು 1, ರಾಮನಗರ 2, ಶಿವಮೊಗ್ಗ 8, ತುಮಕೂರು 36, ಉಡುಪಿ 17, ಉತ್ತರ ಕನ್ನಡ 23, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 07/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/1ocBPtWLiO
@CMofKarnataka @BSBommai @mla_sudhakar @BBMPCOMM @mysurucitycorp @mangalurucorp @DDChandanaNews @AIRBENGALURU1 @KarnatakaVarthe @PIBBengaluru pic.twitter.com/wPilEojnJC
— K'taka Health Dept (@DHFWKA) October 7, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 2 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Covid Vaccine: ಕೊರೊನಾ ಲಸಿಕೆ ಬಳಿಕವೂ ಭಾರತದಲ್ಲಿ ಬೂಸ್ಟರ್ ಶಾಟ್ಸ್ ಅಗತ್ಯವಿದೆ; ಹಿರಿಯ ವಿಜ್ಞಾನಿ
ಇದನ್ನೂ ಓದಿ: ಮಕ್ಕಳಿಗೆ ಕೊರೊನಾ ಲಸಿಕೆ: 3ನೇ ಹಂತದ ಪ್ರಯೋಗ ಮುಕ್ತಾಯ