ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 8) ಹೊಸದಾಗಿ 397 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,80,170 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,30,867 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,866 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,408 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,970 ಕ್ಕೆ ಏರಿಕೆಯಾಗಿದೆ. 12,47,970 ಸೋಂಕಿತರ ಪೈಕಿ 12,24,237 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,180 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,552 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 140, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 12, ಚಿತ್ರದುರ್ಗ 4, ದಕ್ಷಿಣ ಕನ್ನಡ 39, ದಾವಣಗೆರೆ 2, ಧಾರವಾಡ 6, ಗದಗ 0, ಹಾಸನ 27, ಹಾವೇರಿ 0, ಕಲಬುರಗಿ 1, ಕೊಡಗು 6, ಕೋಲಾರ 4, ಕೊಪ್ಪಳ 0, ಮಂಡ್ಯ 3, ಮೈಸೂರು 53, ರಾಯಚೂರು 0, ರಾಮನಗರ 3, ಶಿವಮೊಗ್ಗ 11, ತುಮಕೂರು 20, ಉಡುಪಿ 23, ಉತ್ತರ ಕನ್ನಡ 23, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 08/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/lrm52CPp72
@CMofKarnataka @BSBommai @mla_sudhakar @BBMPCOMM @mysurucitycorp @mangalurucorp @DDChandanaNews @AIRBENGALURU1 @KarnatakaVarthe @PIBBengaluru pic.twitter.com/wfcYay0hfA
— K’taka Health Dept (@DHFWKA) October 8, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆ ಆಗುತ್ತಿದೆ. ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು 400 ಕ್ಕಿಂತಲೂ ಕಡಿಮೆ ವರದಿ ಆಗಿದೆ. ಮೃತರ ಸಂಖ್ಯೆಯಲ್ಲಿ ಕೂಡ ಇಳಿಕೆ ಕಂಡುಬಂದಿದೆ.
ಇದನ್ನೂ ಓದಿ: Covid Vaccine: ಕೊರೊನಾ ಲಸಿಕೆ ಬಳಿಕವೂ ಭಾರತದಲ್ಲಿ ಬೂಸ್ಟರ್ ಶಾಟ್ಸ್ ಅಗತ್ಯವಿದೆ; ಹಿರಿಯ ವಿಜ್ಞಾನಿ
ಇದನ್ನೂ ಓದಿ: Covid Vaccine: ಸದ್ಯದಲ್ಲೇ ಭಾರತದಲ್ಲಿ 100 ಕೋಟಿ ಕೊವಿಡ್ ಲಸಿಕೆ ಗುರಿ ಪೂರ್ತಿಯಾಗಲಿದೆ; ಪ್ರಧಾನಿ ಮೋದಿ ವಿಶ್ವಾಸ