Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 451 ಜನರಿಗೆ ಕೊರೊನಾ ದೃಢ; 9 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 187 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,157 ಕ್ಕೆ ಏರಿಕೆಯಾಗಿದೆ. 12,48,157 ಸೋಂಕಿತರ ಪೈಕಿ 12,25,246 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 451 ಜನರಿಗೆ ಕೊರೊನಾ ದೃಢ; 9 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Oct 09, 2021 | 8:20 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 9) ಹೊಸದಾಗಿ 451 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,80,621 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,32,322 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 9 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,875 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 10,395 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 187 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,157 ಕ್ಕೆ ಏರಿಕೆಯಾಗಿದೆ. 12,48,157 ಸೋಂಕಿತರ ಪೈಕಿ 12,25,246 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,183 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,727 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 187, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 27, ದಾವಣಗೆರೆ 2, ಧಾರವಾಡ 5, ಗದಗ 1, ಹಾಸನ 43, ಹಾವೇರಿ 0, ಕಲಬುರಗಿ 0, ಕೊಡಗು 14, ಕೋಲಾರ 4, ಕೊಪ್ಪಳ 0, ಮಂಡ್ಯ 11, ಮೈಸೂರು 48, ರಾಯಚೂರು 0, ರಾಮನಗರ 1, ಶಿವಮೊಗ್ಗ 9, ತುಮಕೂರು 17, ಉಡುಪಿ 21, ಉತ್ತರ ಕನ್ನಡ 37, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕೊವಿಡ್ ಸೋಂಕಿನಿಂದ 2 ಮಂದಿ ಮರಣಿಸಿದ್ದಾರೆ. ದಾವಣಗೆರೆ, ಧಾರವಾಡ, ಹಾಸನ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: Karnataka Covid Guidelines: ಕರ್ನಾಟಕದಲ್ಲಿ ಹಾಲಿ ಜಾರಿಯಲ್ಲಿರುವ ಕೊವಿಡ್ ಮಾರ್ಗಸೂಚಿ ಅಕ್ಟೋಬರ್ 25ರವರೆಗೆ ವಿಸ್ತರಣೆ

Published On - 8:19 pm, Sat, 9 October 21

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ