Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 967 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು

| Updated By: ganapathi bhat

Updated on: Sep 10, 2021 | 6:59 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 310 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,40,963 ಕ್ಕೆ ಏರಿಕೆಯಾಗಿದೆ. 12,40,963 ಸೋಂಕಿತರ ಪೈಕಿ 12,17,608 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 967 ಜನರಿಗೆ ಕೊರೊನಾ ದೃಢ; 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸಪ್ಟೆಂಬರ್ 10) ಹೊಸದಾಗಿ 967 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,60,131 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,05,604 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,472 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 17,028 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 310 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,40,963 ಕ್ಕೆ ಏರಿಕೆಯಾಗಿದೆ. 12,40,963 ಸೋಂಕಿತರ ಪೈಕಿ 12,17,608 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,045 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,309 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 1, ಬಳ್ಳಾರಿ 6, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 310, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 37, ಚಿತ್ರದುರ್ಗ 10, ದಕ್ಷಿಣ ಕನ್ನಡ 141, ದಾವಣಗೆರೆ 3, ಧಾರವಾಡ 5, ಗದಗ 0, ಹಾಸನ 61, ಹಾವೇರಿ 0, ಕಲಬುರಗಿ 7, ಕೊಡಗು 74, ಕೋಲಾರ 2, ಕೊಪ್ಪಳ 1, ಮಂಡ್ಯ 14, ಮೈಸೂರು 55, ರಾಯಚೂರು 1, ರಾಮನಗರ 0, ಶಿವಮೊಗ್ಗ 32, ತುಮಕೂರು 41, ಉಡುಪಿ 96, ಉತ್ತರ ಕನ್ನಡ 32, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 2 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ ತಲಾ 2 ಮಂದಿ ಬಲಿಯಾಗಿದ್ದಾರೆ. ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಯಲ್ಲಿ ತಲಾ 1 ಮಂದಿ ಕೊವಿಡ್​ಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದ 33 ಜಿಲ್ಲೆಗಳು ಕೊರೊನಾ ಮುಕ್ತ; ಸಕ್ರಿಯ ಪ್ರಕರಣಗಳ ಸಂಖ್ಯೆ ಸೊನ್ನೆ

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆಯದ ಸರ್ಕಾರಿ ನೌಕರರಿಗೆ ಕಡ್ಡಾಯ ರಜೆ; ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡ ಪಂಜಾಬ್ ಸಿಎಂ