Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 801 ಜನರಿಗೆ ಕೊರೊನಾ ದೃಢ; 15 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 207 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,170 ಕ್ಕೆ ಏರಿಕೆಯಾಗಿದೆ. 12,41,170 ಸೋಂಕಿತರ ಪೈಕಿ 12,17,893 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 801 ಜನರಿಗೆ ಕೊರೊನಾ ದೃಢ; 15 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Sep 11, 2021 | 9:02 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸಪ್ಟೆಂಬರ್ 11) ಹೊಸದಾಗಿ 801 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,60,932 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,06,746 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,487 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 16,672 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 207 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,170 ಕ್ಕೆ ಏರಿಕೆಯಾಗಿದೆ. 12,41,170 ಸೋಂಕಿತರ ಪೈಕಿ 12,17,893 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,047 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,229 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 4, ಬೆಳಗಾವಿ 93, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 207, ಬೀದರ್ 2, ಚಾಮರಾಜನಗರ 6, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 39, ಚಿತ್ರದುರ್ಗ 2, ದಕ್ಷಿಣ ಕನ್ನಡ 133, ದಾವಣಗೆರೆ 8, ಧಾರವಾಡ 1, ಗದಗ 0, ಹಾಸನ 17, ಹಾವೇರಿ 0, ಕಲಬುರಗಿ 6, ಕೊಡಗು 59, ಕೋಲಾರ 2, ಕೊಪ್ಪಳ 1, ಮಂಡ್ಯ 12, ಮೈಸೂರು 47, ರಾಯಚೂರು 2, ರಾಮನಗರ 0, ಶಿವಮೊಗ್ಗ 30, ತುಮಕೂರು 26, ಉಡುಪಿ 86, ಉತ್ತರ ಕನ್ನಡ 11, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 2 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ ತಲಾ 4 ಮಂದಿ ಬಲಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾದಿಂದ 2 ಮಂದಿ ಮೃತಪಟ್ಟಿದ್ದಾರೆ. ಚಾಮರಾಜನಗರ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ತಲಾ 1 ಮಂದಿ ಕೊವಿಡ್​ಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: ಗಣೇಶ ಚತುರ್ಥಿ ಬಳಿಕ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಆಗುವ ಸಾಧ್ಯತೆ

ಇದನ್ನೂ ಓದಿ: ಕೊರೊನಾ ಜತೆಜತೆಗೆ ಶ್ವಾಸಕೋಶಕ್ಕೆ ಬೇರೆ ಸೋಂಕು ತಗುಲಿದರೆ ಏನಾಗುತ್ತದೆ? ಹೊಸ ಅಧ್ಯಯನ ಹೇಳಿದ್ದೇನು?

Published On - 7:52 pm, Sat, 11 September 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್