Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 673 ಜನರಿಗೆ ಕೊರೊನಾ ದೃಢ; 13 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 214 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,639 ಕ್ಕೆ ಏರಿಕೆಯಾಗಿದೆ. 12,41,639 ಸೋಂಕಿತರ ಪೈಕಿ 12,18,371 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 673 ಜನರಿಗೆ ಕೊರೊನಾ ದೃಢ; 13 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9kannada Web Team

| Edited By: ganapathi bhat

Sep 13, 2021 | 8:12 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸಪ್ಟೆಂಬರ್ 13) ಹೊಸದಾಗಿ 673 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,62,408 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,08,622 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,517 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 16,241 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 214 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,639 ಕ್ಕೆ ಏರಿಕೆಯಾಗಿದೆ. 12,41,639 ಸೋಂಕಿತರ ಪೈಕಿ 12,18,371 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,056 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,211 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 6, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 214, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 115, ದಾವಣಗೆರೆ 3, ಧಾರವಾಡ 0, ಗದಗ 0, ಹಾಸನ 51, ಹಾವೇರಿ 0, ಕಲಬುರಗಿ 0, ಕೊಡಗು 31, ಕೋಲಾರ 6, ಕೊಪ್ಪಳ 1, ಮಂಡ್ಯ 4, ಮೈಸೂರು 39, ರಾಯಚೂರು 0, ರಾಮನಗರ 2, ಶಿವಮೊಗ್ಗ 21, ತುಮಕೂರು 36, ಉಡುಪಿ 75, ಉತ್ತರ ಕನ್ನಡ 17, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 3 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ತುಮಕೂರು, ಶಿವಮೊಗ್ಗ, ಕೊಡಗು, ಬೆಂಗಳೂರು ಗ್ರಾಮಾಂತರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

ಇದನ್ನೂ ಓದಿ: ಪ್ರಾಣಿ ಸಂಗ್ರಹಾಲಯದ 13 ಗೊರಿಲ್ಲಾಗಳಿಗೆ ಕೊರೊನಾ ಸೋಂಕು ಪತ್ತೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada