Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 559 ಜನರಿಗೆ ಕೊರೊನಾ ದೃಢ; 12 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 231 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,870 ಕ್ಕೆ ಏರಿಕೆಯಾಗಿದೆ. 12,41,870 ಸೋಂಕಿತರ ಪೈಕಿ 12,18,673 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 559 ಜನರಿಗೆ ಕೊರೊನಾ ದೃಢ; 12 ಮಂದಿ ಸಾವು
ಪ್ರಾತಿನಿಧಿಕ ಚಿತ್ರ


ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 14) ಹೊಸದಾಗಿ 559 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,62,967 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,09,656 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 12 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,529 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,754 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 231 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,870 ಕ್ಕೆ ಏರಿಕೆಯಾಗಿದೆ. 12,41,870 ಸೋಂಕಿತರ ಪೈಕಿ 12,18,673 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,060 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,136 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 231, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 8, ಚಿತ್ರದುರ್ಗ 2, ದಕ್ಷಿಣ ಕನ್ನಡ 87, ದಾವಣಗೆರೆ 9, ಧಾರವಾಡ 1, ಗದಗ 0, ಹಾಸನ 10, ಹಾವೇರಿ 1, ಕಲಬುರಗಿ 3, ಕೊಡಗು 23, ಕೋಲಾರ 9, ಕೊಪ್ಪಳ 1, ಮಂಡ್ಯ 10, ಮೈಸೂರು 28, ರಾಯಚೂರು 1, ರಾಮನಗರ 0, ಶಿವಮೊಗ್ಗ 8, ತುಮಕೂರು 24, ಉಡುಪಿ 57, ಉತ್ತರ ಕನ್ನಡ 18, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 4 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಕೊಡಗು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ‘ದೇಶದಲ್ಲಿ ಕೊರೊನಾ ವೈರಸ್​ 3ನೇ ಅಲೆ ಪ್ರಾರಂಭ; ಮಕ್ಕಳಿಗೆ ಇಲ್ಲ ಅಪಾಯ, ಮಾರಣಾಂತಿಕವೂ ಅಲ್ಲ

ಇದನ್ನೂ ಓದಿ: ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

Click on your DTH Provider to Add TV9 Kannada