AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,116 ಜನರಿಗೆ ಕೊರೊನಾ ದೃಢ; 8 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 462 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,42,332 ಕ್ಕೆ ಏರಿಕೆಯಾಗಿದೆ. 12,42,332 ಸೋಂಕಿತರ ಪೈಕಿ 12,18,938 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,116 ಜನರಿಗೆ ಕೊರೊನಾ ದೃಢ; 8 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 15, 2021 | 8:31 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 15) ಹೊಸದಾಗಿ 1,116 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,64,083 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,10,626 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,537 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,892 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 462 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,42,332 ಕ್ಕೆ ಏರಿಕೆಯಾಗಿದೆ. 12,42,332 ಸೋಂಕಿತರ ಪೈಕಿ 12,18,938 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,065 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,328 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 462, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 50, ಚಿತ್ರದುರ್ಗ 5, ದಕ್ಷಿಣ ಕನ್ನಡ 102, ದಾವಣಗೆರೆ 7, ಧಾರವಾಡ 4, ಗದಗ 0, ಹಾಸನ 81, ಹಾವೇರಿ 1, ಕಲಬುರಗಿ 1, ಕೊಡಗು 67, ಕೋಲಾರ 12, ಕೊಪ್ಪಳ 1, ಮಂಡ್ಯ 15, ಮೈಸೂರು 76, ರಾಯಚೂರು 0, ರಾಮನಗರ 0, ಶಿವಮೊಗ್ಗ 25, ತುಮಕೂರು 60, ಉಡುಪಿ 89, ಉತ್ತರ ಕನ್ನಡ 20, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ. ತುಮಕೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಕೊವಿಡ್ ಸೋಂಕು ಎಂಡೆಮಿಕ್ ಹಂತವನ್ನು ತಲುಪಲಿದೆ; ತಜ್ಞರ ಅಭಿಪ್ರಾಯವೇನು? ಇಲ್ಲಿದೆ ವಿವರ

ಇದನ್ನೂ ಓದಿ: ಕೊರೊನಾ ಸಂಕಷ್ಟ ಮುಗಿಯುತ್ತಿದ್ದಂತೆ ಕೊರೊನಾ ವಾರಿಯರ್ಸ್ಗೆ ಕರ್ತವ್ಯದಿಂದ ಮುಕ್ತಿಗೊಳಿಸಲು ಮುಂದಾದ ಆರೋಗ್ಯ ಇಲಾಖೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?