ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 15) ಹೊಸದಾಗಿ 1,116 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,64,083 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,10,626 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,537 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,892 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 462 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,42,332 ಕ್ಕೆ ಏರಿಕೆಯಾಗಿದೆ. 12,42,332 ಸೋಂಕಿತರ ಪೈಕಿ 12,18,938 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,065 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,328 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 462, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 50, ಚಿತ್ರದುರ್ಗ 5, ದಕ್ಷಿಣ ಕನ್ನಡ 102, ದಾವಣಗೆರೆ 7, ಧಾರವಾಡ 4, ಗದಗ 0, ಹಾಸನ 81, ಹಾವೇರಿ 1, ಕಲಬುರಗಿ 1, ಕೊಡಗು 67, ಕೋಲಾರ 12, ಕೊಪ್ಪಳ 1, ಮಂಡ್ಯ 15, ಮೈಸೂರು 76, ರಾಯಚೂರು 0, ರಾಮನಗರ 0, ಶಿವಮೊಗ್ಗ 25, ತುಮಕೂರು 60, ಉಡುಪಿ 89, ಉತ್ತರ ಕನ್ನಡ 20, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 15/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/eQkxkEK0ce @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/1TXqs3HnXv
— K’taka Health Dept (@DHFWKA) September 15, 2021
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 1 ಮಂದಿ ಬಲಿಯಾಗಿದ್ದಾರೆ. ತುಮಕೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ಕೊವಿಡ್ ಸೋಂಕು ಎಂಡೆಮಿಕ್ ಹಂತವನ್ನು ತಲುಪಲಿದೆ; ತಜ್ಞರ ಅಭಿಪ್ರಾಯವೇನು? ಇಲ್ಲಿದೆ ವಿವರ
ಇದನ್ನೂ ಓದಿ: ಕೊರೊನಾ ಸಂಕಷ್ಟ ಮುಗಿಯುತ್ತಿದ್ದಂತೆ ಕೊರೊನಾ ವಾರಿಯರ್ಸ್ಗೆ ಕರ್ತವ್ಯದಿಂದ ಮುಕ್ತಿಗೊಳಿಸಲು ಮುಂದಾದ ಆರೋಗ್ಯ ಇಲಾಖೆ