Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 783 ಜನರಿಗೆ ಕೊರೊನಾ ದೃಢ; 16 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 267 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,43,480 ಕ್ಕೆ ಏರಿಕೆಯಾಗಿದೆ. 12,43,480 ಸೋಂಕಿತರ ಪೈಕಿ 12,19,916 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 19) ಹೊಸದಾಗಿ 783 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,67,866 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,14,852 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 16 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,603 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 15,383 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 267 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,43,480 ಕ್ಕೆ ಏರಿಕೆಯಾಗಿದೆ. 12,43,480 ಸೋಂಕಿತರ ಪೈಕಿ 12,19,916 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,089 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,474 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 267, ಬೀದರ್ 1, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 36, ಚಿತ್ರದುರ್ಗ 13, ದಕ್ಷಿಣ ಕನ್ನಡ 97, ದಾವಣಗೆರೆ 6, ಧಾರವಾಡ 2, ಗದಗ 3, ಹಾಸನ 34, ಹಾವೇರಿ 1, ಕಲಬುರಗಿ 3, ಕೊಡಗು 41, ಕೋಲಾರ 2, ಕೊಪ್ಪಳ 0, ಮಂಡ್ಯ 13, ಮೈಸೂರು 69, ರಾಯಚೂರು 0, ರಾಮನಗರ 0, ಶಿವಮೊಗ್ಗ 28, ತುಮಕೂರು 23, ಉಡುಪಿ 82, ಉತ್ತರ ಕನ್ನಡ 29, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 19/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/rb1DvcZ36K@CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/urcK4fEmc7
— K’taka Health Dept (@DHFWKA) September 19, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 4 ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ. ದಾವಣಗೆರೆ, ಹಾಸನ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Coronavirus: ಲಸಿಕೆ ಪಡೆದವರ ನಿರ್ಲಕ್ಷ್ಯದಿಂದ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಕೊರೊನಾ, ಲಸಿಕೆ ಪಡೆದರೂ ಮರೆಯಬೇಡಿ ಮಾಸ್ಕ್
ಇದನ್ನೂ ಓದಿ: 2.5 ಕೋಟಿ ಡೋಸ್ ದಾಖಲೆ ಬರೆದ ಕೊರೊನಾ ಲಸಿಕೆ ಅಭಿಯಾನ; ಎರಡನೇ ಸ್ಥಾನದಲ್ಲಿದೆ ಕರ್ನಾಟಕ
Published On - 8:38 pm, Sun, 19 September 21