Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 677 ಜನರಿಗೆ ಕೊರೊನಾ ದೃಢ; 24 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 213 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,43,693 ಕ್ಕೆ ಏರಿಕೆಯಾಗಿದೆ. 12,43,693 ಸೋಂಕಿತರ ಪೈಕಿ 12,20,278 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 677 ಜನರಿಗೆ ಕೊರೊನಾ ದೃಢ; 24 ಮಂದಿ ಸಾವು
ಪ್ರಾತಿನಿಧಿಕ ಚಿತ್ರ


ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 20) ಹೊಸದಾಗಿ 677 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,68,543 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,16,530 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 24 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,627 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 14,358 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 213 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,43,693 ಕ್ಕೆ ಏರಿಕೆಯಾಗಿದೆ. 12,43,693 ಸೋಂಕಿತರ ಪೈಕಿ 12,20,278 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,096 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,318 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 213, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 35, ಚಿತ್ರದುರ್ಗ 4, ದಕ್ಷಿಣ ಕನ್ನಡ 102, ದಾವಣಗೆರೆ 3, ಧಾರವಾಡ 5, ಗದಗ 2, ಹಾಸನ 37, ಹಾವೇರಿ 0, ಕಲಬುರಗಿ 3, ಕೊಡಗು 29, ಕೋಲಾರ 23, ಕೊಪ್ಪಳ 0, ಮಂಡ್ಯ 5, ಮೈಸೂರು 37, ರಾಯಚೂರು 0, ರಾಮನಗರ 0, ಶಿವಮೊಗ್ಗ 7, ತುಮಕೂರು 26, ಉಡುಪಿ 63, ಉತ್ತರ ಕನ್ನಡ 41, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ ತಲಾ 4 ಮಂದಿ ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ 3 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಧಾರವಾಡ, ಕೋಲಾರ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 5 ಡೋಸ್​ ಕೊರೊನಾ ಲಸಿಕೆ ಪಡೆದ ಬಿಜೆಪಿ ನಾಯಕ !-ಸರ್ಟಿಫಿಕೇಟ್​ ಡೌನ್​ಲೋಡ್​ ಮಾಡಿದಾಗ ಬೆಳಕಿಗೆ ಬಂತು ಪ್ರಮಾದ

ಇದನ್ನೂ ಓದಿ: ಮಕ್ಕಳೇ ಎಚ್ಚರ ಎಚ್ಚರ! ಕೊರೊನಾ ಮೂರನೇ ಅಲೆ ಭೀತಿ ಮಧ್ಯೆ ರಾಜ್ಯಕ್ಕೆ ಮತ್ತೊಂದು ಶಾಕಿಂಗ್ ನ್ಯೂಸ್

Read Full Article

Click on your DTH Provider to Add TV9 Kannada