Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 818 ಜನರಿಗೆ ಕೊರೊನಾ ದೃಢ; 21 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 359 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,44,052 ಕ್ಕೆ ಏರಿಕೆಯಾಗಿದೆ. 12,44,052 ಸೋಂಕಿತರ ಪೈಕಿ 12,20,659 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 21) ಹೊಸದಾಗಿ 818 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,69,361 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,17,944 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 21 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,648 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,741 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 359 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,44,052 ಕ್ಕೆ ಏರಿಕೆಯಾಗಿದೆ. 12,44,052 ಸೋಂಕಿತರ ಪೈಕಿ 12,20,659 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,104 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,288 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 359, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 10, ಚಿತ್ರದುರ್ಗ 7, ದಕ್ಷಿಣ ಕನ್ನಡ 114, ದಾವಣಗೆರೆ 8, ಧಾರವಾಡ 6, ಗದಗ 1, ಹಾಸನ 23, ಹಾವೇರಿ 0, ಕಲಬುರಗಿ 4, ಕೊಡಗು 25, ಕೋಲಾರ 10, ಕೊಪ್ಪಳ 0, ಮಂಡ್ಯ 13, ಮೈಸೂರು 71, ರಾಯಚೂರು 0, ರಾಮನಗರ 0, ಶಿವಮೊಗ್ಗ 17, ತುಮಕೂರು 24, ಉಡುಪಿ 73, ಉತ್ತರ ಕನ್ನಡ 22, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 21/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/L96j8QTRdR @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/pod1qujbln
— K’taka Health Dept (@DHFWKA) September 21, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 8 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯಲ್ಲಿ ತಲಾ 2 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಪ್ಪಳ, ರಾಮನಗರ, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಏಕ ಡೋಸ್ ಕೊರೊನಾ ಲಸಿಕೆ ಅಕ್ಟೋಬರ್ನಿಂದ ದೇಶದಲ್ಲಿ ಲಭ್ಯ; ಅಭಿಯಾನಕ್ಕೆ ಮತ್ತಷ್ಟು ಬಲ
ಇದನ್ನೂ ಓದಿ: ಅಕ್ಟೋಬರ್ನಿಂದ ಕೊವಿಡ್ 19 ಲಸಿಕೆ ರಫ್ತು ಮತ್ತೆ ಪ್ರಾರಂಭ; ಇಂದು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ
Published On - 8:34 pm, Tue, 21 September 21