ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 25) ಹೊಸದಾಗಿ 787 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,72,620 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,21,567 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,717 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,307 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 276 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,45,235 ಕ್ಕೆ ಏರಿಕೆಯಾಗಿದೆ. 12,45,235 ಸೋಂಕಿತರ ಪೈಕಿ 12,21,669 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,129 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,436 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 22, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 276, ಬೀದರ್ 0, ಚಾಮರಾಜನಗರ 6, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 27, ಚಿತ್ರದುರ್ಗ 7, ದಕ್ಷಿಣ ಕನ್ನಡ 127, ದಾವಣಗೆರೆ 1, ಧಾರವಾಡ 6, ಗದಗ 0, ಹಾಸನ 19, ಹಾವೇರಿ 1, ಕಲಬುರಗಿ 1, ಕೊಡಗು 25, ಕೋಲಾರ 22, ಕೊಪ್ಪಳ 0, ಮಂಡ್ಯ 9, ಮೈಸೂರು 65, ರಾಯಚೂರು 1, ರಾಮನಗರ 2, ಶಿವಮೊಗ್ಗ 21, ತುಮಕೂರು 29, ಉಡುಪಿ 68, ಉತ್ತರ ಕನ್ನಡ 27, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 25/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/UIEaDKxngM @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/hpjyIsWwjW
— K’taka Health Dept (@DHFWKA) September 25, 2021
ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Ragi Kana Santhe: ಕೊರೊನಾದಿಂದ ಸ್ಥಗಿತಗೊಂಡಿದ್ದ ‘ರಾಗಿ ಕಣ ಸಂತೆ’ ಅಕ್ಟೋಬರ್ 2ರಿಂದ ಪುನರಾರಂಭ
ಇದನ್ನೂ ಓದಿ: Mysore Dasara 2021: ಕೊರೊನಾದಿಂದ ಜಟ್ಟಿ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್ ಇಲ್ಲಿದೆ