Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 504 ಜನರಿಗೆ ಕೊರೊನಾ ದೃಢ; 20 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 181 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,45,671 ಕ್ಕೆ ಏರಿಕೆಯಾಗಿದೆ. 12,45,671 ಸೋಂಕಿತರ ಪೈಕಿ 12,22,139 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 504 ಜನರಿಗೆ ಕೊರೊನಾ ದೃಢ; 20 ಮಂದಿ ಸಾವು
ಸಾಂದರ್ಭಿಕ ಚಿತ್ರ


ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 27) ಹೊಸದಾಗಿ 504 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,73,899 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,23,320 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 20 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,746 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 12,804 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 181 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,45,671 ಕ್ಕೆ ಏರಿಕೆಯಾಗಿದೆ. 12,45,671 ಸೋಂಕಿತರ ಪೈಕಿ 12,22,139 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,137 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,394 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 181, ಬೀದರ್ 1, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 19, ಚಿತ್ರದುರ್ಗ 7, ದಕ್ಷಿಣ ಕನ್ನಡ 83, ದಾವಣಗೆರೆ 2, ಧಾರವಾಡ 0, ಗದಗ 0, ಹಾಸನ 18, ಹಾವೇರಿ 0, ಕಲಬುರಗಿ 1, ಕೊಡಗು 26, ಕೋಲಾರ 11, ಕೊಪ್ಪಳ 0, ಮಂಡ್ಯ 8, ಮೈಸೂರು 47, ರಾಯಚೂರು 1, ರಾಮನಗರ 0, ಶಿವಮೊಗ್ಗ 18, ತುಮಕೂರು 20, ಉಡುಪಿ 24, ಉತ್ತರ ಕನ್ನಡ 12, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಮೈಸೂರು ಜಿಲ್ಲೆಯಲ್ಲಿ 3 ಮರಣಗಳು ವರದಿಯಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿಗೆ 2 ಮಂದಿ ಬಲಿಯಾಗಿದ್ದಾರೆ. ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಕೋಲಾರ, ತುಮಕೂರು ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Bengaluru Night Curfew: ಅಕ್ಟೋಬರ್ 11ವರೆಗೂ ನೈಟ್ ಕರ್ಫ್ಯೂ ಮುಂದುವರಿಕೆ: ಕಮಲ್ ಪಂತ್ ಆದೇಶ

ಇದನ್ನೂ ಓದಿ: Mysore Dasara 2021: ಕೊರೊನಾದಿಂದ ಜಟ್ಟಿ‌ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್​ ಇಲ್ಲಿದೆ

Read Full Article

Click on your DTH Provider to Add TV9 Kannada