Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 629 ಜನರಿಗೆ ಕೊರೊನಾ ದೃಢ; 17 ಮಂದಿ ಸಾವು
ಬೆಂಗಳೂರಿನಲ್ಲಿ ಇಂದು ಒಂದೇ ದಿನ 229 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,45,900 ಕ್ಕೆ ಏರಿಕೆಯಾಗಿದೆ. 12,45,900 ಸೋಂಕಿತರ ಪೈಕಿ 12,22,338 ಜನರು ಗುಣಮುಖರಾಗಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 28) ಹೊಸದಾಗಿ 629 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,74,528 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,24,102 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,763 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 12,634 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 229 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,45,900 ಕ್ಕೆ ಏರಿಕೆಯಾಗಿದೆ. 12,45,900 ಸೋಂಕಿತರ ಪೈಕಿ 12,22,338 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,143 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,418 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 12, ಬೆಂಗಳೂರು ಗ್ರಾಮಾಂತರ 16, ಬೆಂಗಳೂರು ನಗರ 229, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 17, ಚಿತ್ರದುರ್ಗ 5, ದಕ್ಷಿಣ ಕನ್ನಡ 96, ದಾವಣಗೆರೆ 1, ಧಾರವಾಡ 7, ಗದಗ 0, ಹಾಸನ 27, ಹಾವೇರಿ 2, ಕಲಬುರಗಿ 0, ಕೊಡಗು 30, ಕೋಲಾರ 5, ಕೊಪ್ಪಳ 0, ಮಂಡ್ಯ 22, ಮೈಸೂರು 58, ರಾಯಚೂರು 0, ರಾಮನಗರ 2, ಶಿವಮೊಗ್ಗ 14, ತುಮಕೂರು 22, ಉಡುಪಿ 39, ಉತ್ತರ ಕನ್ನಡ 16, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಇಂದಿನ 28/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/6gxFZj4fQx @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/EZYCXixMLK
— K’taka Health Dept (@DHFWKA) September 28, 2021
ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 3, ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯಲ್ಲಿ 2 ಮರಣಗಳು ವರದಿಯಾಗಿವೆ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೋಲಾರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ತಲಾ 1 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Coronavirus: ಕೇರಳದಿಂದ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ವಿಚಾರ; ಮಧ್ಯಪ್ರವೇಶಿಸಲು ಕೇರಳ ಹೈಕೋರ್ಟ್ ನಕಾರ
ಇದನ್ನೂ ಓದಿ: Bengaluru: ಒಂದೇ ಕಾಲೇಜಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್