Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,705 ಜನರಿಗೆ ಕೊರೊನಾ ಸೋಂಕು ದೃಢ; 30 ಮಂದಿ ಸಾವು

ಬೆಂಗಳೂರಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,044ಕ್ಕೆ ಏರಿಕೆಯಾಗಿದೆ. 12,24,044 ಸೋಂಕಿತರ ಪೈಕಿ 11,99,859 ಜನರು ಗುಣಮುಖರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,705 ಜನರಿಗೆ ಕೊರೊನಾ ಸೋಂಕು ದೃಢ; 30 ಮಂದಿ ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Jul 23, 2021 | 8:02 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 23) ಹೊಸದಾಗಿ 1,705 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,91,699 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,31,226 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 30 ಜನರ ಸಾವು ಸಂಭವಿಸಿದೆ. ತನ್ಮೂಲಕ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,323 ಜನ ಮೃತರಾಗಿದ್ದಾರೆ. ರಾಜ್ಯದಲ್ಲಿ 24,127 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,044ಕ್ಕೆ ಏರಿಕೆಯಾಗಿದೆ. 12,24,044 ಸೋಂಕಿತರ ಪೈಕಿ 11,99,859 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,820 ಜನ ಸಾವನ್ನಪ್ಪಿದಂತಾಗಿದೆ. ಬೆಂಗಳೂರಲ್ಲಿ 8364 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳು ಬಾಗಲಕೋಟೆ 8, ಬಳ್ಳಾರಿ 10, ಬೆಳಗಾವಿ 90, ಬೆಂಗಳೂರು ಗ್ರಾಮಾಂತರ 41, ಬೆಂಗಳೂರು ನಗರ 400, ಬೀದರ್ 2, ಚಾಮರಾಜನಗರ 30, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 69, ಚಿತ್ರದುರ್ಗ 10, ದಕ್ಷಿಣ ಕನ್ನಡ 295, ದಾವಣಗೆರೆ 20, ಧಾರವಾಡ 6, ಗದಗ 3, ಹಾಸನ 83, ಹಾವೇರಿ 4, ಕಲಬುರಗಿ 7, ಕೊಡಗು 62, ಕೋಲಾರ 34, ಕೊಪ್ಪಳ 3, ಮಂಡ್ಯ 38, ಮೈಸೂರು 157, ರಾಯಚೂರು 1, ರಾಮನಗರ 8, ಶಿವಮೊಗ್ಗ 74, ತುಮಕೂರು 72, ಉಡುಪಿ 131, ಉತ್ತರ ಕನ್ನಡ 23, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ ಇಂದು ಮೂವರಿಗೆ ಕೊರೊನಾ ದೃಢವಾಗಿದೆ.

ಜಿಲ್ಲಾವಾರು ಕೊರೊನಾದಿಂದ ಮೃತರ ವಿವರ ದಕ್ಷಿಣ ಕನ್ನಡ, ಕೋಲಾರ ಜಿಲ್ಲೆಯಲ್ಲಿಂದು ತಲಾ ನಾಲ್ವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ, ಧಾರವಾಡ ಜಿಲ್ಲೆಯಲ್ಲಿಂದು ತಲಾ ಇಬ್ಬರು ಮೃತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಬೆಳಗಾವಿ, ಚಾಮರಾಜನಗರ, ಹಾವೇರಿ, ದಾವಣಗೆರೆ, ಗದಗ, ಕೊಡಗು, ಮಂಡ್ಯ, ತುಮಕೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,323 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Tokyo Olympics: ಚಿಲಿ ಮತ್ತು ನೆದರ್‌ಲ್ಯಾಂಡ್ಸ್‌ ಸ್ಪರ್ಧಿಗಳಲ್ಲಿ ಕೊರೊನಾ ಸೋಂಕು ಪತ್ತೆ; ಒಟ್ಟು 8 ಆಟಗಾರರಿಗೆ ಸೋಂಕು ಧೃಡ

Karnataka Rains: ಕರ್ನಾಟಕದ ಹಲವೆಡೆ ಮಹಾಮಳೆ; 6 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬಿಎಸ್ ಯಡಿಯೂರಪ್ಪ ಸಭೆ

(Karnataka New Corona Covid 19 Cases Active Total Corona Virus Cases Covid Deaths)

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್