Karnataka Covid Update: ಕರ್ನಾಟಕದಲ್ಲಿ ಇಂದು ಹೊಸದಾಗಿ 2162 ಕೊರೊನಾ ಪ್ರಕರಣ ಪತ್ತೆ; 48 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 452 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,18,945 ಕ್ಕೆ ಏರಿಕೆಯಾಗಿದೆ.

Karnataka Covid Update: ಕರ್ನಾಟಕದಲ್ಲಿ ಇಂದು ಹೊಸದಾಗಿ 2162 ಕೊರೊನಾ ಪ್ರಕರಣ ಪತ್ತೆ; 48 ಮಂದಿ ಸಾವು
ಸಂಗ್ರಹ ಚಿತ್ರ
Follow us
TV9 Web
| Updated By: ganapathi bhat

Updated on:Jul 10, 2021 | 8:02 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 10) ಹೊಸದಾಗಿ 2,162 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,69,320ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 27,96,377 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 48 ಜನರ ಸಾವು ಸಂಭವಿಸಿದೆ. ತನ್ಮೂಲಕ, ಈವರೆಗೆ ಕೊರೊನಾದಿಂದ 35,779 ಜನರು ನಿಧನರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 37,141 ಜನರಲ್ಲಿ ಕೊರೊನಾ ಸೋಂಕು ಪ್ರಕರಣ ಸಕ್ರಿಯವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 452 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,18,945 ಕ್ಕೆ ಏರಿಕೆಯಾಗಿದೆ. 12,18,945 ಸೋಂಕಿತರ ಪೈಕಿ 11,89,979 ಜನರು ಗುಣಮುಖ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,728 ಜನ ಸಾವನ್ನಪ್ಪಿದ್ದಾರೆ. ನಗರದಲ್ಲಿ 13,237 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಬಾಗಲಕೋಟೆ 1, ಬಳ್ಳಾರಿ 27, ಬೆಳಗಾವಿ 106, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 452, ಬೀದರ್ 4, ಚಾಮರಾಜನಗರ 37, ಚಿಕ್ಕಬಳ್ಳಾಪುರ 22, ಚಿಕ್ಕಮಗಳೂರು 109, ಚಿತ್ರದುರ್ಗ 34, ದಕ್ಷಿಣ ಕನ್ನಡ 218, ದಾವಣಗೆರೆ 36, ಧಾರವಾಡ 25, ಗದಗ 9, ಹಾಸನ 178, ಹಾವೇರಿ 9, ಕಲಬುರಗಿ 9, ಕೊಡಗು 108, ಕೋಲಾರ 73, ಕೊಪ್ಪಳ 10, ಮಂಡ್ಯ 63, ಮೈಸೂರು 211, ರಾಯಚೂರು 2, ರಾಮನಗರ 23, ಶಿವಮೊಗ್ಗ 110, ತುಮಕೂರು 98, ಉಡುಪಿ 113, ಉತ್ತರ ಕನ್ನಡ 56, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ ಇಂದು 6 ಜನರಿಗೆ ಕೊರೊನಾ ದೃಢಪಟ್ಟಿದೆ.

ಜಿಲ್ಲಾವಾರು ಮೃತರ ಸಂಖ್ಯೆ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 48 ಜನರ ಸಾವು ಸಂಭವಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ 6, ಬೆಂಗಳೂರಿನಲ್ಲಿ 5, ಕೋಲಾರ, ಮಂಡ್ಯ ಜಿಲ್ಲೆಯಲ್ಲಿ ಇಂದು ತಲಾ 4, ಚಾಮರಾಜನಗರ, ತುಮಕೂರು ಜಿಲ್ಲೆಯಲ್ಲಿ ತಲಾ 3, ದಾವಣಗೆರೆ, ಹಾಸನ ಜಿಲ್ಲೆಯಲ್ಲಿ ಇಂದು ತಲಾ 2, ಮೈಸೂರು ಜಿಲ್ಲೆಯಲ್ಲಿ 2, ಬಾಗಲಕೋಟೆ, ಹಾವೇರಿ ಜಿಲ್ಲೆಯಲ್ಲಿ 1, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ 1, ಕಲಬುರಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 1 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,779 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Field Report: ಆನಂದಯ್ಯನ ಕೊರೊನಾ ಔಷಧ ಪರಿಣಾಮ ಬೀರುವುದೇ? ಔಷಧ ಸೇವಿಸಿದ ಕೊಪ್ಪಳದ ಜನರು ಹೇಳುವುದೇನು?

How To: ಕೊರೊನಾ ಕಾಲದಲ್ಲಿ ಹೆಚ್ಚುತ್ತಿದೆ ಸೈಬರ್ ದಾಳಿ; ಸುರಕ್ಷಿತ ಆನ್​ಲೈನ್ ಶಾಪಿಂಗ್ ಹೇಗೆ?

Published On - 7:55 pm, Sat, 10 July 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?