ರಾಜ್ಯದಲ್ಲಿ ನಾಳೆಯಿಂದಲೇ ವೀಕೆಂಡ್ ಕರ್ಫ್ಯೂ ಕ್ಯಾನ್ಸಲ್; ಸಚಿವರ ಸಲಹೆಗೆ ಸಿಎಂ ಬೊಮ್ಮಾಯಿ ಸಹಮತ, ಅಧಿಕೃತ ಘೋಷಣೆ ಬಾಕಿ

ರಾಜ್ಯದಲ್ಲಿ ನಾಳೆಯಿಂದಲೇ ವೀಕೆಂಡ್ ಕರ್ಫ್ಯೂ ಕ್ಯಾನ್ಸಲ್; ಸಚಿವರ ಸಲಹೆಗೆ ಸಿಎಂ ಬೊಮ್ಮಾಯಿ ಸಹಮತ, ಅಧಿಕೃತ ಘೋಷಣೆ ಬಾಕಿ
ಸಿಎಂ ಬಸವರಾಜ ಬೊಮ್ಮಾಯಿ

Karnataka New Covid Guidelines: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಹೊಸ ಮಾರ್ಗಸೂಚಿಗಳ ಕುರಿತು ಚರ್ಚೆ ಮಾಡಲಾಗಿದೆ. ವೀಕೆಂಡ್ ಕರ್ಫ್ಯೂವನ್ನು ಸರ್ಕಾರ ವಾಪಸ್ ಪಡೆದಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.

TV9kannada Web Team

| Edited By: shivaprasad.hs

Jan 21, 2022 | 2:26 PM


ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಹಾಗೆಯೇ ಸಭೆ- ಸಮಾರಂಭಗಳಿಗೆ ಇರುವ ನಿಯಮ ಹಳೆಯ ನಿಯಮವೇ ಮುಂದುವರಿಕೆಯಾಗಲಿದೆ. ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ. ಸಭೆಯಲ್ಲಿ ಸಚಿವರಾದ ಡಾ.ಕೆ ಸುಧಾಕರ್, ಆರಗ ಜ್ಞಾನೇಂದ್ರ, ಆರ್. ಅಶೋಕ್, ಗೋವಿಂದ್ ಕಾರಜೋಳ, ಬಿಸಿ ನಾಗೇಶ್ ಭಾಗಿಯಾಗಿದ್ದರು. ವಿಶ್ವ ಆರೋಗ್ಯ ಸಂಸ್ಥೆಯ ಓರ್ವ ಪ್ರತಿನಿಧಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಹಿಂದೆ ವೀಕೆಂಡ್, ನೈಟ್ ಕರ್ಫ್ಯೂಗೆ ಹಲವು ನಾಯಕರು, ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ತಜ್ಞರು ಶಿಫಾರಸು ಮಾಡಿದ್ದರು. ಕೊವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ 50:50 ರೂಲ್ಸ್ ಮಾಡಿ. ಕೊವಿಡ್ ಹೆಚ್ಚಿರುವ ಕಡೆ ನಿರ್ಬಂಧ ಅಗತ್ಯ. ಬೆಂಗಳೂರು ನಗರದಲ್ಲಿ ಕೊವಿಡ್ ಪಾಸಿಟಿವಿಟಿ ದರ ಹೆಚ್ಚಿದೆ. ಅಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಟಿಎಸಿ ಅಧ್ಯಕ್ಷ ಡಾ.ಸುದರ್ಶನ್ ರಿಂದ ಸಭೆಯಲ್ಲಿ ವರದಿಯನ್ನು ಸಲ್ಲಿಸಲಾಗಿತ್ತು.

ಸಚಿವರ ಸಲಹೆ ಏನು?
ವೀಕೆಂಡ್ ಕರ್ಫ್ಯೂ ಮಾಡದಿರಲು ಸಿಎಂ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ವೀಕೆಂಡ್ ಕರ್ಫ್ಯೂ ತೆರವು ಮಾಡುವಂತೆ ಸಚಿವರಿಂದ ಸಲಹೆ ನೀಡಲಾಯಿತು. ಸಚಿವರ ಸಲಹೆಗೆ ಸಿಎಂ ಬೊಮ್ಮಾಯಿರಿಂದ ಸಹಮತ ವ್ಯಕ್ತಪಡಿಸಿದ್ದಾರೆ. ಯುರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳು ಇಲ್ಲ. ಕೊವಿಡ್ 3ನೇ ಅಲೆ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳೋಣ. ಒಂದು ವೇಳೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಆಗ ಬೇಕಾದರೆ ಬಿಗಿ ಕ್ರಮ ಮುಂದುವರಿಸೋಣ ಎಂದು ಸಚಿವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ:

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದ ಮಾದರಿ 4 ಕಲಾಕ್ಷೇತ್ರ ನಿರ್ಮಾಣಕ್ಕೆ ಯೋಜನೆ; ಸಚಿವ ಸುನಿಲ್ ಕುಮಾರ್ ಮಾಹಿತಿ

ಫೇಸ್​ಮಾಸ್ಕ್​ ಧರಿಸುವಂತೆ ವ್ಯಾಕ್ಸಿನ್​ ವಿರೋಧಿಗಳ ವಿರುದ್ಧ ಲೈವ್​ನಲ್ಲೇ ಕಿರುಚಾಡಿದ ನ್ಯೂಸ್​ ಆ್ಯಂಕರ್​

Follow us on

Related Stories

Most Read Stories

Click on your DTH Provider to Add TV9 Kannada