AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿ ಪ್ರಿಯರಿಗೆ ಶಾಕ್​​: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಂದಿಬೆಟ್ಟ, ಮುಳ್ಳಯ್ಯನಗಿರಿ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಅಹಿತಕರ ಘಟನೆಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ಈ ಕ್ರಮ ಕೈಗೊಂಡಿವೆ. ಪ್ರವಾಸಿಗರು ತಮ್ಮ ಪ್ರವಾಸ ಯೋಜನೆ ರೂಪಿಸುವ ಮೊದಲು ನಿರ್ಬಂಧಿತ ಸ್ಥಳಗಳ ಮಾಹಿತಿಯನ್ನು ಪರಿಶೀಲಿಸುವುದು ಉತ್ತಮ.

ಪ್ರವಾಸಿ ಪ್ರಿಯರಿಗೆ ಶಾಕ್​​: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ
ನಂದಿ ಬೆಟ್ಟ
ಪ್ರಸನ್ನ ಹೆಗಡೆ
|

Updated on:Dec 29, 2025 | 2:40 PM

Share

ಬೆಂಗಳೂರು/ಚಿಕ್ಕಮಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನಲೆ ಫ್ಯಾಮಿಲಿ, ಸ್ನೇಹಿತರ ಜೊತೆ ಟೂರ್​​ ಹೋಗೋರ ಸಂಖ್ಯೆ ಅತ್ಯಧಿಕವಾಗಿರುತ್ತೆ. ನೀವು ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗೋಣ ಎಂದುಕೊಂಡಿದ್ರೆ ಆ ಸ್ಥಳಗಳು ಅಂದು ಓಪನ್​​ ಇರುತ್ತಾ ಅಥವಾ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ಯಾ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಿ. ಯಾಕೆಂದ್ರೆ ಬೆಂಗಳೂರು ಸಮೀಪದ ನಂದಿಗಿರಿಧಾಮ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಟೂರಿಸ್ಟ್​​ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ನಂದಿಗಿರಿಧಾಮಕ್ಕಿಲ್ಲ ಪ್ರವೇಶ

ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್​​ ಆಗಿರಲಿದೆ. ಅತಿಥಿಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಿಷೇಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರರಿಂದ ಆದೇಶ ಮಾಡಿದ್ದಾರೆ. ಕುಡಿದು ಪ್ರವಾಸಿಗರ ಮೋಜು ಮಸ್ತಿ ಮಾಡೋದನ್ನು ತಡೆಯುವ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರೋದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2026ರ ಹೊಸ ವರ್ಷ ಈ ಮೂರು ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ; ಮುಟ್ಟಿದೆಲ್ಲಾ ಚಿನ್ನ!

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ನಿರ್ಬಂಧ

ನ್ಯೂ ಇಯರ್ ಆಚರಣೆಗೆ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಜಿಲ್ಲಾಡಳಿತ ಅಲರ್ಟ್ ಆಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಪ್ರವಾಸಿತಾಣಗಳಿಗೆ ಡಿ.31ರ ಸಂಜೆ 6 ಗಂಟೆಯಿಂದ ಜ.1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ಸ್ಥಾಳಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಪ್ರವಾಸಿತಾಣಗಳಲ್ಲಿ ಪಾರ್ಟಿ, ನ್ಯೂ ಇಯರ್ ಆಚರಣೆಗೂ ನಿರ್ಬಂಧ ಹೇರಲಾಗಿದೆ.

ಮಂಗಳವಾರವೂ ಬನ್ನೇರುಘಟ್ಟ ಮೃಗಾಲಯ ಓಪನ್

ಕ್ರಿಸ್ ಮಸ್ ಮತ್ತು ಹೊಸವರ್ಷಾಚರಣೆ ರಜೆ ಹಿನ್ನೆಲೆ ಮಂಗಳವಾರವೂ ಬನ್ನೇರುಘಟ್ಟ ಮೃಗಾಲಯ ಓಪನ್ ಇರಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಝೂಗೆ ಭೇಟಿ ನೀಡುವ ಸಾಧ್ಯತೆ ಹಿನ್ನಲೆ ವಾಡಿಕೆಯ ರಜೆ ದಿನವೂ ಮೃಗಾಲಯ ಓಪನ್ ಇರಲಿದೆ. ಪ್ರವಾಸಿಗರಿಗೆ ಮೃಗಾಲಯ ಮತ್ತು ಚಿಟ್ಟೆ ಪಾರ್ಕ್ ನೋಡಲು ಅವಕಾಶ ಇರಲಿದ್ದು, ಆನ್​​ಲೈನ್​​ ಮೂಲಕವೂ ಡಿಕೆಟ್​​ ಪಡೆದುಕೊಳ್ಳಬಹುದು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಡಳಿತ ಮಂಡಳಿ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:28 pm, Mon, 29 December 25

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!