AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka New CM: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇಂದೇ -ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಘೋಷಣೆ

Karnataka New CM: ಕರ್ನಾಟಕ ಮುಖ್ಯಮಂತ್ರಿ ಅಯ್ಕೆ ಇಂದೇ ತಿರ್ಮಾನ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಘೋಷಣೆ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

Karnataka New CM:  ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇಂದೇ -ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಘೋಷಣೆ
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (ಸಂಗ್ರಹ ಚಿತ್ರ)
TV9 Web
| Updated By: Lakshmi Hegde|

Updated on:Jul 27, 2021 | 3:54 PM

Share

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಘೋಷಣೆ ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದು, ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಸಾಥ್​ ನೀಡಿದ್ದಾರೆ. ಈ ವೇಳೆ ಬಿಜೆಪಿ‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ಪ್ರಕಟಿಸಿದ್ದಾರೆ.

ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು‌ ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ.

ಸಂಸದೀಯ ಮಂಡಳಿ ನಿರ್ದೇಶನದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಸಿಎಂ ಆಯ್ಕೆ ಅದಕ್ಕೂ ಮುನ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಬಿ) ಮಾತನಾಡಿದ ರಾಜ್ಯ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಕಳೆದ ಎರಡು ವರ್ಷದಲ್ಲಿ ಯಡಿಯೂರಪ್ಪ ಸರ್ಕಾರದಿಂದ ಒಳ್ಳೆಯ ಕೆಲಸ ನಡೆದಿದೆ. ಎಲ್ಲ ವರ್ಗ, ಕ್ಷೇತ್ರದಲ್ಲಿ ಸರ್ಕಾರದಿಂದ ಉತ್ತಮ ಕೆಲಸಗಳಾಗಿವೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.

ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಫಿಕ್ಸ್​ ಆಯ್ತು, ಇಂದೇ ಹೊಸ ಮುಖ್ಯಮಂತ್ರಿ ಆಯ್ಕೆ?

(Karnataka news chief minister to be elected today on july 27 karnataka bjp incharge arun singh)

Published On - 3:37 pm, Tue, 27 July 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!