AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಮದ್ಯ ಸೇವನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗ್ರಸ್ಥಾನ, ಜಿಲ್ಲೆಯಲ್ಲಿ ಮದ್ಯದ ಅಂಗಡಿ ಸಂಖ್ಯೆಯಲ್ಲೂ ಹೆಚ್ಚಳ

ಬುದ್ಧಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷೀಣ ಕನ್ನಡ ಜಿಲ್ಲೆ ಮದ್ಯ ಸೇವನೆಯಲ್ಲಿ ಇಡೀ ರಾಜ್ಯಕ್ಕೆ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೆ ಮದ್ಯದ ಅಂಗಡಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ.

Trending: ಮದ್ಯ ಸೇವನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಗ್ರಸ್ಥಾನ, ಜಿಲ್ಲೆಯಲ್ಲಿ ಮದ್ಯದ ಅಂಗಡಿ ಸಂಖ್ಯೆಯಲ್ಲೂ ಹೆಚ್ಚಳ
ಸಾಂದರ್ಭಿಕ ಚಿತ್ರ (ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ)
TV9 Web
| Edited By: |

Updated on:Jul 14, 2022 | 3:28 PM

Share

ಶೈಕ್ಷಣಿಕ ವಿಚಾರದಲ್ಲಿ, ಕೋಮು ಸಂಘರ್ಷದಲ್ಲಿ, ಉದ್ಯೋಗದ ವಿಚಾರದಲ್ಲಿ ಸದಾ ಸುದ್ದಿಯಲ್ಲಿರುವ ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡ (Dakshina Kannada) ಮತ್ತೊಂದು ಖ್ಯಾತಿಯನ್ನು ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಕುಡುಕರ ಸಂಖ್ಯೆ ಹೆಚ್ಚಾಗುವ ಮೂಲಕ ಮದ್ಯ ಸೇವನೆಯಲ್ಲಿ ಇಡೀ ರಾಜ್ಯದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ದಿನಕ್ಕೆ ಸುಮಾರು 60 ಲೀಟರ್​ನಂತೆ ಪ್ರತಿ ವರ್ಷ ಸುಮಾರು 2.2 ಕೋಟಿ ಲೀಟರ್ ಹಾರ್ಡ್ ಲಿಕ್ಕರ್, 1.4 ಕೋಟಿ ಲೀಟರ್ ಬಿಯರ್ ಮಾರಾಟವಾಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಮದ್ಯ ಸೇವನೆಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಇದನ್ನೂ ಓದಿ: Viral Video: ಹರಿಯುತ್ತಿರುವ ನದಿಯನ್ನು ಎಚ್ಚರಿಕೆಯಿಂದ ದಾಟಿದ ಆಡಿನ ಹಿಂಡು; ಜೀವನದ ಪಾಠ ಕಲಿಸುವ ವಿಡಿಯೋ ವೈರಲ್

ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 25 ಲಕ್ಷ ಬಾಕ್ಸ್ ಹಾರ್ಡ್ ಡ್ರಿಂಕ್ಸ್ ಮದ್ಯವನ್ನು ಸೇವಿಸಲಾಗಿದೆ. ವರ್ಷಕ್ಕೆ ಸರಾಸರಿ 18 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಈ ಆರ್ಥಿಕ ವರ್ಷದಲ್ಲಿ ಮದ್ಯ ಮಾರಾಟದಿಂದ ಸುಮಾರು 370 ಕೋಟಿ ರೂಪಾಯಿ ಆದಾಯ ರಾಜ್ಯಸರ್ಕಾರದ ಬೊಕ್ಕಸಕ್ಕೆ ಹರಿದುಬಂದಿದೆ.

ಅಬಕಾರಿ ಇಲಾಖೆಯ ಉಪ ಆಯುಕ್ತೆ ಬಿಂದುಶ್ರೀ ಪಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದ ಟೈಮ್ಸ್ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳು ಹೆಚ್ಚಾಗುತ್ತಿವೆ. ಕಳೆದ ವರ್ಷ 463 ಮದ್ಯದಂಗಡಿಗಳು ಜಿಲ್ಲೆಯಲ್ಲಿ ಇದ್ದವು. ಪ್ರಸ್ತುದ ಆ ಸಂಖ್ಯೆ 520ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 180 ಎಂಎಲ್​ ಸ್ಯಾಚೆಟ್ ಮದ್ಯಗಳು ಅತಿ ಹೆಚ್ಚು ಮಾರಾಟವಾಗುತ್ತಿವೆ ಎಂದು ಹೇಳಿದೆ.

ಇದನ್ನೂ ಓದಿ: Viral Video: ಮಳೆಯ ನೀರು ತಾಗಬಾರದೆಂದು ತಂಗಿಯನ್ನು ಬೆನ್ನ ಮೇಲೆ ಕೂರಿಸಿ ರಸ್ತೆ ದಾಟಿಸಿದ ಅಣ್ಣ; ವಿಡಿಯೋ ವೈರಲ್​

ಮದ್ಯ ಮಾರಾಟದ ಮೇಲೆ ಕೋವಿಡ್ ಎಫೆಕ್ಟ್

ರಾಜ್ಯಕ್ಕೆ ಕೊರೋನಾ ಮಹಾಮಾರಿ ಸೋಂಕು ಕಾಲಿಟ್ಟ ನಂತರ ವ್ಯಾಪಾರದ ಮೇಲೆ ತೀರಾ ಹೊಡೆತ ಬಿದ್ದಿದೆ. ಇದರಲ್ಲಿ ಮದ್ಯ ವ್ಯಾಪಾರ ಹೊರತಾಗಿಲ್ಲ. ಕೇರಳ-ಕರ್ನಾಟಕ ಗಡಿಭಾಗದ ಪ್ರದೇಶದಲ್ಲಿ ಮದ್ಯ ಸೇವನೆ ಮಾಡುವವರು ಹೆಚ್ಚಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಮದ್ಯ ಖರೀದಿಸುತ್ತಾರೆ. ಕೋವಿಡ್ ಹಿನ್ನೆಲೆಯಿಂದ ಈ ಭಾಗದಲ್ಲಿ ಮಾರಾಟಕ್ಕೆ ಹೊಡೆತ ಬಿದ್ದಿದೆ. ಇನ್ನಷ್ಟೇ ಈ ಭಾಗದಲ್ಲಿ ಮದ್ಯ ಮಾರಾಟ ಸುಧಾರಿಸಬೇಕಿದೆ ಎಂದು ಬಿಂದುಶ್ರೀ ಹೇಳಿದ್ದಾರೆ.

ಅಗ್ಗದ ಮದ್ಯಕ್ಕೆ ಭಾರಿ ಡಿಮ್ಯಾಂಡ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗ್ಗದ ಬೆಲೆಯ ಮದ್ಯಗಳಿಗೆ ಹೆಚ್ಚು ಬೇಡಿಕೆ ಇದೆ. ಮಾರಾಟವಾಗುವ ಮದ್ಯಗಳ ಪೈಕಿ ಶೇ.85ರಷ್ಟು ಮದ್ಯಗಳು ಅಗ್ಗದ ಬೆಲೆಯದ್ದಾಗಿವೆ. ಶೇ.3ರಷ್ಟು ಜನರು ಮಾತ್ರ ಡೀಲಕ್ಸ್, ಸ್ಕಾಚ್, ಸಿಂಗಲ್ ಮಾಲ್ಟ್, ಪ್ರೀಮಿಯಂನಂತಹ ಮದ್ಯವನ್ನು ಖರೀದಿಸುತ್ತಾರೆ.

ಇದನ್ನೂ ಓದಿ: Viral Video: ಬೆಸ್ಟ್ ಫ್ರೆಂಡ್ ಮದುವೆಗೆ ಹೋಗುವ ಮುನ್ನ ‘ಮೆಹಂದಿ ಹೈ ರಚನೇವಾಲಿ’ ಹಾಡಿಗೆ ನೃತ್ಯ ಮಾಡಿದ ಸುಂದರಿಯರು

Published On - 3:26 pm, Thu, 14 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್