ಶೈಕ್ಷಣಿಕ ವಿಚಾರದಲ್ಲಿ, ಕೋಮು ಸಂಘರ್ಷದಲ್ಲಿ, ಉದ್ಯೋಗದ ವಿಚಾರದಲ್ಲಿ ಸದಾ ಸುದ್ದಿಯಲ್ಲಿರುವ ಬುದ್ಧಿವಂತರ ಜಿಲ್ಲೆ ದಕ್ಷಿಣ ಕನ್ನಡ (Dakshina Kannada) ಮತ್ತೊಂದು ಖ್ಯಾತಿಯನ್ನು ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಕುಡುಕರ ಸಂಖ್ಯೆ ಹೆಚ್ಚಾಗುವ ಮೂಲಕ ಮದ್ಯ ಸೇವನೆಯಲ್ಲಿ ಇಡೀ ರಾಜ್ಯದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ದಿನಕ್ಕೆ ಸುಮಾರು 60 ಲೀಟರ್ನಂತೆ ಪ್ರತಿ ವರ್ಷ ಸುಮಾರು 2.2 ಕೋಟಿ ಲೀಟರ್ ಹಾರ್ಡ್ ಲಿಕ್ಕರ್, 1.4 ಕೋಟಿ ಲೀಟರ್ ಬಿಯರ್ ಮಾರಾಟವಾಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಮದ್ಯ ಸೇವನೆಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ.
ಇದನ್ನೂ ಓದಿ: Viral Video: ಹರಿಯುತ್ತಿರುವ ನದಿಯನ್ನು ಎಚ್ಚರಿಕೆಯಿಂದ ದಾಟಿದ ಆಡಿನ ಹಿಂಡು; ಜೀವನದ ಪಾಠ ಕಲಿಸುವ ವಿಡಿಯೋ ವೈರಲ್
ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ 25 ಲಕ್ಷ ಬಾಕ್ಸ್ ಹಾರ್ಡ್ ಡ್ರಿಂಕ್ಸ್ ಮದ್ಯವನ್ನು ಸೇವಿಸಲಾಗಿದೆ. ವರ್ಷಕ್ಕೆ ಸರಾಸರಿ 18 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಈ ಆರ್ಥಿಕ ವರ್ಷದಲ್ಲಿ ಮದ್ಯ ಮಾರಾಟದಿಂದ ಸುಮಾರು 370 ಕೋಟಿ ರೂಪಾಯಿ ಆದಾಯ ರಾಜ್ಯಸರ್ಕಾರದ ಬೊಕ್ಕಸಕ್ಕೆ ಹರಿದುಬಂದಿದೆ.
ಅಬಕಾರಿ ಇಲಾಖೆಯ ಉಪ ಆಯುಕ್ತೆ ಬಿಂದುಶ್ರೀ ಪಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದ ಟೈಮ್ಸ್ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳು ಹೆಚ್ಚಾಗುತ್ತಿವೆ. ಕಳೆದ ವರ್ಷ 463 ಮದ್ಯದಂಗಡಿಗಳು ಜಿಲ್ಲೆಯಲ್ಲಿ ಇದ್ದವು. ಪ್ರಸ್ತುದ ಆ ಸಂಖ್ಯೆ 520ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 180 ಎಂಎಲ್ ಸ್ಯಾಚೆಟ್ ಮದ್ಯಗಳು ಅತಿ ಹೆಚ್ಚು ಮಾರಾಟವಾಗುತ್ತಿವೆ ಎಂದು ಹೇಳಿದೆ.
ಇದನ್ನೂ ಓದಿ: Viral Video: ಮಳೆಯ ನೀರು ತಾಗಬಾರದೆಂದು ತಂಗಿಯನ್ನು ಬೆನ್ನ ಮೇಲೆ ಕೂರಿಸಿ ರಸ್ತೆ ದಾಟಿಸಿದ ಅಣ್ಣ; ವಿಡಿಯೋ ವೈರಲ್
ಮದ್ಯ ಮಾರಾಟದ ಮೇಲೆ ಕೋವಿಡ್ ಎಫೆಕ್ಟ್
ರಾಜ್ಯಕ್ಕೆ ಕೊರೋನಾ ಮಹಾಮಾರಿ ಸೋಂಕು ಕಾಲಿಟ್ಟ ನಂತರ ವ್ಯಾಪಾರದ ಮೇಲೆ ತೀರಾ ಹೊಡೆತ ಬಿದ್ದಿದೆ. ಇದರಲ್ಲಿ ಮದ್ಯ ವ್ಯಾಪಾರ ಹೊರತಾಗಿಲ್ಲ. ಕೇರಳ-ಕರ್ನಾಟಕ ಗಡಿಭಾಗದ ಪ್ರದೇಶದಲ್ಲಿ ಮದ್ಯ ಸೇವನೆ ಮಾಡುವವರು ಹೆಚ್ಚಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಮದ್ಯ ಖರೀದಿಸುತ್ತಾರೆ. ಕೋವಿಡ್ ಹಿನ್ನೆಲೆಯಿಂದ ಈ ಭಾಗದಲ್ಲಿ ಮಾರಾಟಕ್ಕೆ ಹೊಡೆತ ಬಿದ್ದಿದೆ. ಇನ್ನಷ್ಟೇ ಈ ಭಾಗದಲ್ಲಿ ಮದ್ಯ ಮಾರಾಟ ಸುಧಾರಿಸಬೇಕಿದೆ ಎಂದು ಬಿಂದುಶ್ರೀ ಹೇಳಿದ್ದಾರೆ.
ಅಗ್ಗದ ಮದ್ಯಕ್ಕೆ ಭಾರಿ ಡಿಮ್ಯಾಂಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗ್ಗದ ಬೆಲೆಯ ಮದ್ಯಗಳಿಗೆ ಹೆಚ್ಚು ಬೇಡಿಕೆ ಇದೆ. ಮಾರಾಟವಾಗುವ ಮದ್ಯಗಳ ಪೈಕಿ ಶೇ.85ರಷ್ಟು ಮದ್ಯಗಳು ಅಗ್ಗದ ಬೆಲೆಯದ್ದಾಗಿವೆ. ಶೇ.3ರಷ್ಟು ಜನರು ಮಾತ್ರ ಡೀಲಕ್ಸ್, ಸ್ಕಾಚ್, ಸಿಂಗಲ್ ಮಾಲ್ಟ್, ಪ್ರೀಮಿಯಂನಂತಹ ಮದ್ಯವನ್ನು ಖರೀದಿಸುತ್ತಾರೆ.
Published On - 3:26 pm, Thu, 14 July 22