ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಒಂದೇ ದಿನ ಐದು ಶವ ಪತ್ತೆ!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಕಪ್ಪು ಚುಕ್ಕೆಯಾಗಿದೆ. ಇದು ಸಹಜವಾಗಿ ಸರ್ಕಾರದ ವಿರುದ್ಧ ವಿಪಕ್ಷಗಳ ಆರೋಪಕ್ಕೆ ಕಾರಣವಾಗಿದ್ದರೇ, ಅರಳಿಕಟ್ಟೆಗೆ ಚರ್ಚೆಯ ವಿಷಯವಾಗಿದೆ. ಈ ಮಧ್ಯೆ ರವಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ಶವಗಳು ಪತ್ತೆಯಾಗಿವೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಒಂದೇ ದಿನ ಐದು ಶವ ಪತ್ತೆ!
ಸಾಂದರ್ಭಿಕ ಚಿತ್ರ
Follow us
|

Updated on: May 19, 2024 | 3:05 PM

ಬೆಂಗಳೂರು, ಮೇ 19: ಕಳೆದ ಒಂದು ತಿಂಗಳ ಒಳಗೆ ನಡೆದ ಮೂರು ಜನ ಹೆಣ್ಣುಮಕ್ಕಳ ಕೊಲೆ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ (Law and order) ಬಗ್ಗೆ ಪ್ರಶ್ನೆ ಉದ್ಭವಿಸುವಂತೆ ಮಾಡಿವೆ. ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ, ರವಿವಾರ ಒಂದೇ ವಿವಿಧ ಜಿಲ್ಲೆಯಲ್ಲಿ ದಿನ ಐದು ಶವಗಳು ಪತ್ತೆಯಾಗಿದ್ದು, ಆತಂಕ್ಕೆ ಕಾರಣವಾಗಿದೆ. ಹೌದು ಇಂದು (ಮೇ 19) ಬೆಂಗಳೂರು, ಮೈಸೂರು, ಬಾಗಲಕೋಟೆ, ಉಡುಪಿ ಜಿಲ್ಲೆಗಳಲ್ಲಿ ಶವ ಪತ್ತೆಯಾಗಿದೆ.

ಬೆಂಗಳೂರಿನ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ 35 ವರ್ಷ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯನಗರದ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮ ಬಳಿಯ ತುಂಗಭದ್ರಾ ನದಿಯಲ್ಲಿ 43 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೈಸೂರು ನಗರದ ಹೊರವಲಯದ ಸಿಗ್ನಲ್ ಬಳಿಯ ಮೋರಿಯಲ್ಲಿ ಪತ್ತೆ ಅಂಗಾತ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ವಿದ್ಯುತ್​ ತಂತಿ ತುಳಿದು ವ್ಯಕ್ತಿ ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ವಿದ್ಯುತ್​ ತಂತಿ ಗಾಳಿ ಮಳೆಯಿಂದ ತುಂಡಾಗಿ ಬಿದ್ದಿತ್ತು. ಇದನ್ನು ತಿಳಯದೆ ವಿದ್ಯುತ್​ ತಂತಿ ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದಲ್ಲಿ ಹಾವು ಕಡಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೈನಜಾ ಮುಜಾವರ್​ (24) ಮೃತ ದುರ್ದೈವಿ. ಶೈನಜಾ ಮುಜಾವರ್​ ತೋಟದ ಮನೆಯಲ್ಲಿ ಮಲಗಿದ್ದಾಗ ಹಾವು ಕಡಿದಿದೆ. ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ