ರಾಜ್ಯದ ವಿವಿಧೆಡೆ ರಸ್ತೆ ಅಪಘಾತ: 6 ಜನರ ಸಾವು

ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ಹೆಚ್ಚಾಗುತ್ತಿವೆ. ರಾಜ್ಯದ ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಬರೊಬ್ಬರಿ 6 ಜನ ಮೃತಪಟ್ಟಿದ್ದಾರೆ. ಏ.28 ರಂದು ರಾಮನಗರದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಇಂದು (ಮೇ 06) ಮೃತಪಟ್ಟಿದ್ದಾಳೆ.

ರಾಜ್ಯದ ವಿವಿಧೆಡೆ ರಸ್ತೆ ಅಪಘಾತ: 6 ಜನರ ಸಾವು
ಅಯೋಧ್ಯೆ ಬಳಿ ಲಾರಿ-ಟಿಟಿ ನಡುವೆ ಮುಖಾಮುಖಿ ಡಿಕ್ಕಿ: ಕಲಬುರಗಿ ಮೂಲದ ಮೂವರು ಸಾವು
Follow us
ವಿವೇಕ ಬಿರಾದಾರ
|

Updated on: May 06, 2024 | 1:09 PM

ಬೆಂಗಳೂರು, ಮೇ 06: ರಾಜ್ಯದ ವಿವಿಧಡೆ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು 6 ಜನ ಮೃತಪಟ್ಟಿದ್ದಾರೆ. ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಮೃಪಟ್ಟಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆ ಎನ್​.ಆರ್​​.ಪುರ ತಾಲೂಕಿನ ಕರುಗುಂದ ಗ್ರಾಮದ ಬಳಿ ನಡೆದಿದೆ. ಹೊರನಾಡು ಮೂಲದ ಸುನೀಲ್ (30), ಉಮೇಶ್ (35) ಮೃತ ದುರ್ದೈವಿಗಳು. ಎನ್​.ಆರ್​.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು ಪಲ್ಟಿ, ಇಬ್ಬರ ದುರ್ಮರಣ

ದಾವಣಗೆರೆ: ಜಿಲ್ಲೆಯ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65) ಹಾಗೂ ಪುಷ್ಪಾ (55) ಮೃತ ದುರ್ದೈವಿಗಳು. ಚಿತ್ರದುರ್ಗದಲ್ಲಿ ಮದುವೆ ಮುಗಿಸಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಬೈಕ್​ ಸವಾರ ಸಾವು

ತುಮಕೂರು: ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ಕೆಎಸ್​ಆರ್​ಟಿಸಿ ಬಸ್​ಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಧುಗಿರಿ ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮದ ಮಹೇಂದ್ರ (19) ಮೃತ ದುರ್ದೈವಿ. ಬೈಕ್​ನಲ್ಲಿದ್ದ ಚರಣ್, ಅನಿಲ್ ಎಂಬುವವರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ಚಿಕಿತ್ಸೆ ಫಲಿಸದೆ ಬಾಲಕಿ ಸಾವು

ರಾಮನಗರ: ಅಪಘಾತದಲ್ಲಿ ಗಾಯಗೊಂಡು ಎಂಟು ದಿನ ಕೋಮಾದಲ್ಲಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಮೋಹಿತಾ (9) ಮೃತ ದುರ್ದೈವಿ. ಏಪ್ರಿಲ್​ 28ರಂದು ಕನಕಪುರ ತಾಲೂಕಿನ ತಾಮಸಂದರ್​ ನಿವಾಸಿ ಮಂಜುನಾಥ್ ಟಿಪಿ ಮತ್ತು ಮಗಳು ಮೋಹಿತಾ ಮಧ್ಯಾಹ್ನ ಬೈಕ್​ನಲ್ಲಿ ಕಬ್ಬಾಳಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದರು. ದಾರಿ ಮಧ್ಯೆ ಮೋಹಿತಾ ಐಸ್​ಕ್ರೀಂ ಕೊಡಿಸು ಪಪ್ಪಾ ಎಂದಿದ್ದಾಳೆ. ಮಗಳಿಗೆ ಐಸ್ ಕ್ರೀಂ‌ ಕೊಡಿಸಲು ಮಂಜುನಾಥ್​ ಬೈಕ್ ಪಕ್ಕಕ್ಕೆ ಹಾಕಿದ್ದರು. ಬೈಕಿನಿಂದ ಇಳಿಯುವಷ್ಟರಲ್ಲಿ ಹಿಂದಿನಿಂದ ಬಂದ ಕಾರು ತಂದೆ-ಮಗಳಿಗೆ ಗುದ್ದಿದೆ.

ಘಟನೆಯಲ್ಲಿ ಗಾಯಗೊಂಡ ಮಂಜುನಾಥ್ ಹಾಗೂ ಮೋಹಿತಾಳ ಆಸ್ಪತ್ರೆ ಸಾಗಿಸಲಾಗಿತ್ತು. ಆಸ್ಪತ್ರೆ ಸಾಗಿಸುವಷ್ಟರಲ್ಲಿ ಮಂಜುನಾಥ್ ಮೃತಪಟ್ಟಿದ್ದರು. ಮೋಹಿತಾಳನ್ನು ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮೋಹಿತಾಳ ಬ್ರೇನ್ ಡೆಡ್ ಆಗಿದೆ ಎಂದು ಹೇಳಿದ್ದರು. ಕಳೆದ ಆರು ದಿನಗಳದಿಂದ ವೆಂಟಿಲೇಟರ್ ಮೇಲಿದ್ದ ಮೋಹಿತಾ, ಚೇತರಿಸಿಕೊಳ್ಳದ ಕಾರಣ ವೈದ್ಯರು ಪೋಷಕರ ಅನುಮತಿ ಮೇರೆಗೆ ವೆಂಟಿಲೇಟರ್ ತೆಗೆದಿದ್ದಾರೆ. ಮೋಹಿತಾ ಕೊನೆಯುಸಿರೆಳೆದಿದ್ದಾಳೆ.

ತಂದೆ ಮಗಳಿಗೆ ಗುದ್ದಿದ ಕಾರು ಉದ್ಯಮಿ ಮನೋಹರ್ ಗುಪ್ತಾ ಅವರದ್ದಾಗಿದೆ. ಮನೋಹರ್ ಗುಪ್ತಾ ಕುಡಿದ ಅಮಲಿನಲ್ಲಿ ಗುದ್ದಿದ್ದಾರೆ ಎಂದು ಕುಟುಂಬಸ್ಥರ ಆರೋಪ ಮಾಡಿದ್ದಾರೆ. ಪೊಲೀಸರು ಲಂಚ ತಿಂದು ಆರೋಪಿ ಬಿಟ್ಟು ಕಳುಹಿಸಿದ್ದಾರೆ ಅಂತ ಆರೋಪ ಮಾಡಿದ್ದಾರೆ.

ಈಜಲು ಹೋಗಿ ವ್ಯಕ್ತಿ ಸಾವು

ಮೈಸೂರು: ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೆರೆಯಲ್ಲಿ ಈಜಲು ಹೋಗಿ ಯುವಕ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆ ರಾಮಸಮುದ್ರ ಗ್ರಾಮದ ದೊಡ್ಡಬೀದಿ ನಿವಾಸಿ ಗುಣಶೇಖರ್ (22) ಮೃತ ಯುವಕ. ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್