ಕರ್ನಾಟಕದಲ್ಲಿ ಭೀಕರ ಬರದ ನಡುವೆ ನೀರಿಗಾಗಿ ಮತ್ತೆ ಕ್ಯಾತೆ ತೆಗೆದ ತಮಿಳುನಾಡು
ರಾಜ್ಯದಲ್ಲಿ ಈಗಾಗಲೇ ಭೀಕರ ಬರಗಾಲಕ್ಕೆ ಕಂಗಾಲಾಗಿದ್ದು, ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಈ ಮಧ್ಯೆ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆದಿದೆ. ಹೌದು, ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿದೆ. ಇಂದು(ಏ.30) ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಒತ್ತಾಯಿಸಿದ್ದಾರೆ.

ನವದೆಹಲಿ, ಏ.30: ಕಾವೇರಿ ನದಿ ನೀರು(cauvery water) ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ ರಾಜ್ಯದ ಜನ ಭೀಕರ ಬರಕ್ಕೆ ಕಂಗಾಲಾಗಿದ್ದಾರೆ. ಇದರ ನಡುವೆ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆದಿದೆ. ಹೌದು, ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿದೆ. ಕುಡಿಯಲು 0.5 ಟಿಎಂಸಿ ನೀರು ಸಾಕು, ಕುಡಿಯುವ ನೀರಿನ ನೆಪದಲ್ಲಿ ನೀರು ಬಿಡುಗಡೆಗೆ ನಿರಾಕರಿಸದೆ, ನಮ್ಮ ತಿಂಗಳ ಪಾಲು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಇಂದು(ಏ.30) ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಒತ್ತಾಯಿಸಿದ್ದಾರೆ.
ತಮಿಳುನಾಡು ಆಗ್ರಹಕ್ಕೆ ರಾಜ್ಯದಿಂದ ತೀವ್ರ ವಿರೋಧ
ಇನ್ನು ತಮಿಳುನಾಡಿನ ಒತ್ತಾಯಕ್ಕೆ ವಿರೋಧಿಸಿ, ‘ರಾಜ್ಯದಲ್ಲಿ ಭೀಕರ ಬರದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದೆ. ನೀರು ಹರಿಸಲು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲವೆಂದು ವಾದ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು ರಾಜ್ಯಗಳ ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ, ಮೇ 16ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ಮೇ ತಿಂಗಳ ಕೊನೆ ವಾರದಲ್ಲಿ ಸಿಡಬ್ಲ್ಯೂಎಮ್ಎ ಸಭೆ ನಡೆಸಲಿದೆ.
ಇದನ್ನೂ ಓದಿ:ಆಗಸ್ಟ್, ಸೆಪ್ಟೆಂಬರ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿವಾದ ಉಲ್ಬಣಗೊಳ್ಳುವುದೇಕೆ? ಇಲ್ಲಿವೆ ಕೆಲವು ಕಾರಣ
ಕರ್ನಾಟಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿಲ್ಲ
ಇನ್ನು ಸಭೆಯಲ್ಲಿ ಮಾತನಾಡಿ ತಮಿಳುನಾಡು ಅಧಿಕಾರಿಗಳು, ‘ಮಳೆಯ ಕೊರತೆ ಹಿನ್ನಲೆ ಕರ್ನಾಟಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಿಲ್ಲ, ನಿಗಧಿತ ಪ್ರಮಾಣದ ನೀರು ಹರಿಸಿಲ್ಲ. ಫೆ.1 ರಿಂದ ಏಪ್ರಿಲ್ 28 ವರೆಗೂ ಪರಿಸರಕ್ಕೆ 7.33 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಕರ್ನಾಟಕ 5.31 ಟಿಎಂಸಿ ನೀರು ಮಾತ್ರ ಹರಿಸಿದೆ. ಇದರಲ್ಲೂ 2.016 ಟಿಎಂಸಿ ಬಾಕಿ ಉಳಿಸಿಕೊಂಡಿದೆ. ಮೆಟ್ಟೂರಿನಲ್ಲಿ 20 ಟಿಎಂಸಿಯಷ್ಟು ನೀರಿದೆ. ಕುಡಿಯಲು ಮತ್ತು ಪರಿಸರಕ್ಕೆ ಬಳಸಲಾಗುತ್ತಿದೆ. ಬಾಕಿ ಉಳಿಸಿಕೊಂಡ ಪರಿಸರ ಬಳಕೆ ನೀರು ಬಿಡುಗಡೆ ಮಾಡಬೇಕು ಎಂದಿದ್ದಾರೆ.
ಇದಕ್ಕೆ ಉತ್ತರಿಸಿದ ಕರ್ನಾಟಕ, ‘ಕಾವೇರಿ ಬೇಸಿನ್ನಲ್ಲಿರುವ ನೀರು ಕುಡಿಯಲು ಮಾತ್ರ ಸಾಕಾಗಲಿದೆ ಎಂದಿದ್ದಾರೆ. ಈ ಮಧ್ಯೆ ಪ್ರವೇಶಿಸಿದ CWRC ಅಧ್ಯಕ್ಷ ವಿನೀತ್ ಗುಪ್ತಾ, ‘ಅದಾಗ್ಯೂ ಮೇ ತಿಂಗಳ ಬಿಳಿಗುಂಡ್ಲು ಬಳಿ 2.5 ಟಿಎಂಸಿ ಪರಿಸರ ನೀರು ಹರಿವಿನ ಬಗ್ಗೆ ಖಚಿತಪಡಿಸಿಕೊಳ್ಳಲು ಕರ್ನಾಟಕಕ್ಕೆ ಸೂಚನೆ ನೀಡಿದರು. ಆದರೆ, ಈ ಇದಕ್ಕೆ ಪರಿಸ್ಥಿತಿ ಅವಲೋಕಿಸುವುದಾಗಿ ಕರ್ನಾಟಕ ಹೇಳಿದೆ. ಇನ್ನು ಈ 2.5 ಟಿಎಂಸಿ ಜೊತೆಗೆ ಕೊರತೆಯ ಭಾಗದಲ್ಲಿ 25 ಟಿಎಂಸಿ ನೀರು ಹರಿಸಲು ಸೂಚನೆ ನೀಡಲು ತಮಿಳುನಾಡು ಮನವಿ ಮಾಡಿದೆ. ಆದರೆ, ಈ ರಾಜ್ಯಗಳ ವಾದ ಆಲಿಸಿರುವ CWRC ಮೇ 16ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:16 pm, Tue, 30 April 24



