ಮೋದಿ ಬೆನ್ನಲ್ಲೇ ಮೇ 01 ರಂದು ಕರ್ನಾಟಕಕ್ಕೆ ಅಮಿತ್ ಶಾ: ಎಲ್ಲೆಲ್ಲಿ ಪ್ರಚಾರ? ವಿವರ ಇಲ್ಲಿದೆ
ಲೋಕಸಭಾ ಚುನಾವಣೆ ಹಿನ್ನಲೆ ಮೊನ್ನೆಯಷ್ಟೇ ಪ್ರಧಾನಿ ಮೋದಿ ಅವರು ಆಗಮಿಸಿ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಇದರ ಬೆನ್ನಲ್ಲೇ ನಾಳೆ(ಮೇ.01) ರಾಜ್ಯಕ್ಕೆ ಚುನಾವಣಾ ಚಾಣಕ್ಯ ಎಂಟ್ರಿಕೊಡಲಿದ್ದಾರೆ. ಹೌದು, ನಾಳೆ(ಏ.1) ಮಧ್ಯಾಹ್ನ 3.20ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಮತಬೇಟೆ ನಡೆಸಲಿದ್ದಾರೆ. ಈ ಕುರಿತು ವಿವರ ಇಲ್ಲಿದೆ.
ಹುಬ್ಬಳ್ಳಿ, ಏ.30: ಈಗಾಗಲೇ ಚುನಾವಣಾ ಕಾವು ಜೋರಾಗಿದೆ. ಅದರಂತೆ ಮೇ.7 ರಂದು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ(Lok Sabha Election) ಹಿನ್ನಲೆ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ನಾಳೆ(ಏ.1) ಮಧ್ಯಾಹ್ನ 3.20ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಎಲ್ಲೆಲ್ಲಿ ಪ್ರಚಾರ?
ಇನ್ನು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಲಿರುವ ಅಮಿತ್ ಶಾ, ರಾಣೆಬೆನ್ನೂರಿನ ಕುರಬಗಿರಿ ಕ್ರಾಸ್ನಿಂದ ಅಶೋಕ ಸರ್ಕಲ್ವರೆಗೆ ಬೃಹತ್ ರೋಡ್ಶೋ ನಡೆಸಲಿದ್ದಾರೆ. ರೋಡ್ ಶೋ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಶಾ, ಸಂಜೆ 5.45ಕ್ಕೆ ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಹ್ಲಾದ್ ಜೋಶಿ ಪರ ಮತಬೇಟೆ ನಡೆಸಲಿದ್ದಾರೆ. ನಂತರ ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಸಾಧ್ಯತೆಯಿದೆ. ತದನಂತರ ರಾತ್ರಿ 7.10ಕ್ಕೆ ಹುಬ್ಬಳ್ಳಿ ಏರ್ಪೋರ್ಟ್ನಿಂದ ಹೈದರಾಬಾದ್ಗೆ ತೆರಳಲಿದ್ದಾರೆ.
ಇದನ್ನೂ ಓದಿ:ಅಮಿತ್ ಶಾ ಭಾಷಣ ತಿರುಚಿದ ಪ್ರಕರಣ: ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್
ಇನ್ನು ಮೇ 1 ರಂದು ನಮ್ಮ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ನಿರಂಜನ ಅವರ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಏ.28 ರಂದು ಸುದ್ದಿಗೋಷ್ಟಿ ನಡೆಸಿ ಮಾಜಿ ಸಚಿವ ಮುರಗೇಶ್ ನಿರಾಣಿ ಹೇಳಿದ್ದರು. ನಗರದ ನೇಹಾ ಹಿರೇಮಠ ಅವರ ಮನೆಗೆ ಭೇಟಿ ನೀಡುವ ಮೂಲಕ ನಿರಂಜನ ಹಾಗೂ ತಾಯಿ ಗೀತಾ ಹಿರೇಮಠ ಅವರಿಗೆ ಸಾಂತ್ವನ ಹೇಳಿದ ನಿರಾಣಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ‘ನೇಹಾ ಹತ್ಯೆಯನ್ನು ನಾನು ಖಂಡಿಸಿಸುತ್ತೇನೆ. ಅಮಿತ್ ಶಾ ಅವರು ಬಂದಾಗ ಈ ಬಗ್ಗೆ ಚರ್ಚೆ ಮಾಡಿ ಮುಂದಿನ ತನಿಖೆ ಬಗ್ಗೆ ಹೇಗೆ ಎನ್ನುವುದನ್ನು ತಿಳಿಸುತ್ತೇವೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:38 pm, Tue, 30 April 24