ಚೊಂಬು ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಚೊಂಬು ಜಾಹೀರಾತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಅವಹೇಳನ ಮಾಡಿದೆ. ಈ ಬಗ್ಗೆ ಕ್ಷಮೆ ಕೋರುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿದ್ದ ಚೊಂಬು ಜಾಹೀರಾತು ನಂತರ ರಾಜ್ಯದಲ್ಲಿ ಜಾಹೀರಾತು ಸಮರಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​​ನ ಚೊಂಬು ಜಾಹೀರಾತಿನಿಂದ ಕೆರಳಿದ್ದ ಬಿಜೆಪಿ ಕೂಡ ಹಲವು ಜಾಹೀರಾತುಗಳನ್ನು ನೀಡಿತ್ತು.

ಚೊಂಬು ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಚೊಂಬು ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Updated on: Apr 25, 2024 | 8:27 AM

ಬೆಂಗಳೂರು, ಏಪ್ರಿಲ್ 25: ಬಿಜೆಪಿ (BJP) ವಿರುದ್ಧ ಅವಹೇಳನಕಾರಿ ಜಾಹೀರಾತು (Advertisement) ನೀಡಿರುವ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಚುನಾವಣಾ ಆಯೋಗಕ್ಕೆ (Election Commission) ಬಿಜೆಪಿ ಮನವಿ ಮಾಡಿದೆ. ಚೊಂಬು ಜಾಹೀರಾತು ನೀಡುವ ಮೂಲಕವಾಗಿ ಅವಹೇಳನ ಮಾಡಿದ್ದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬುಧವಾರ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ಸಲ್ಲಿಸಿದೆ.

‘ಇದು ಚೊಂಬು’ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಪಕ್ಷವು ಪತ್ರಿಕೆಗಳಿಗೆ ಜಾಹೀರಾತು ನೀಡಿತ್ತು. ಅದರ ಫೋಟೋದೊಂದಿಗೆ ದೂರು ನೀಡಿರುವ ಬಿಜೆಪಿ, ‘ಚೊಂಬು’ ಪದವು ಕನ್ನಡದ ಆಡುಭಾಷೆಯಾಗಿದೆ ಮತ್ತು ಇದನ್ನು ‘ಮೋಸಗೊಳಿಸುವುದು ಅಥವಾ ಖಾಲಿ ಭರವಸೆಗಳನ್ನು’ ನೀಡುವುದನ್ನು ಸೂಚಿಸಲು ಬಳಸಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಿಗಿದೆ.

ಈ ಜಾಹೀರಾತಿನ ಉದ್ದೇಶವು ಕೇಂದ್ರ ಸರ್ಕಾರವು ರಾಜ್ಯಕ್ಕೆ ಮೋಸ ಮಾಡಿದೆ ಎಂಬುದನ್ನು ಬಿಂಬಿಸುವುದಾಗಿದೆ. ಆದರೆ, ಕಾಂಗ್ರೆಸ್​ ಈ ಆರೋಪ ಸಂಪೂರ್ಣ ಸುಳ್ಳು ಎಂದು ದೂರಿನಲ್ಲಿ ಬಿಜೆಪಿ ಉಲ್ಲೇಖಿಸಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿದ್ದ ಚೊಂಬು ಜಾಹೀರಾತು ನಂತರ ರಾಜ್ಯದಲ್ಲಿ ಜಾಹೀರಾತು ಸಮರಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​​ನ ಚೊಂಬು ಜಾಹೀರಾತಿನಿಂದ ಕೆರಳಿದ್ದ ಬಿಜೆಪಿ, 2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚೊಂಬು ಹಿಡಿದುಕೊಂಡು ಬಯಲುಶೌಚಕ್ಕೆ ಹೋಗುತ್ತಿರುವ ಮತ್ತು 2023ರಲ್ಲಿ ಚೊಂಬು ಹಿಡಿದುಕೊಂಡು ಶೌಚಾಲಯಕ್ಕೆ ಹೋಗುತ್ತಿರುವ ಎಡಿಟೆಡ್ ಚಿತ್ರವನ್ನು ಟ್ವೀಟ್ ಮಾಡಿ ‘ಇಷ್ಟೇ ವ್ಯತ್ಯಾಸ’ ಎಂದು ವ್ಯಂಗ್ಯವಾಡಿತ್ತು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಪ್ರಚಾರದ ಅಖಾಡದಲ್ಲಿ ಚೊಂಬು, ಚಿಪ್ಪು, ಟಾಯ್ಲೆಟ್ಟು: ಟೀಕೆಗಳಲ್ಲೂ ಕ್ರಿಯಾಶೀಲತೆ ಉಂಟು!

ನಂತರ ಉಭಯ ಪಕ್ಷಗಳ ಜಾಹೀರಾತು ಸಮರ ಮುಂದುವರಿದಿದ್ದು, ‘ಕಾಂಗ್ರೆಸ್ ಡೇಂಜರ್’ ಎಂಬ ಜಾಹೀರಾತನ್ನು ಬಿಜೆಪಿ ನೀಡಿತ್ತು. ಬಳಿಕ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಜನತೆ ಕೈಗೆ ಚಿಪ್ಪು ನೀಡಲಾಗಿದೆ ಎಂದು ಜಾಹೀರಾತು ನೀಡಿತ್ತು. ನಂತರ ಕಾಂಗ್ರೆಸ್ ಪಿಕ್​ಪಾಕೆಟ್ ಮಾಡುತ್ತಿದೆ ಎಂದು ಜಾಹೀರಾತು ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us