ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳ ರಕ್ಷಣೆ

| Updated By: ವಿವೇಕ ಬಿರಾದಾರ

Updated on: Apr 12, 2024 | 1:00 PM

ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸುವುದು ಮತ್ತು ಕಾರ್ಮಿಕ ಕೆಲಸಗಳಿಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದರೂ ಕೂಡ ಮಕ್ಕಳ್ಳನ್ನು ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಮಕ್ಕಳ್ಳನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ. ಮತ್ತು 36 ಜನ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳ ರಕ್ಷಣೆ
ಸಿಸಿಬಿ
Follow us on

ಬೆಂಗಳೂರು, ಏಪ್ರಿಲ್​ 12: ನಗರದಲ್ಲಿ ಭಿಕ್ಷಾಟನೆಯಲ್ಲಿ (Begging) ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು (Children) ಸಿಸಿಬಿ ಪೊಲೀಸರು (CCB Police) ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ರಂಜಾನ್ ಹಿನ್ನೆಲೆಯಲ್ಲಿ ಅಪ್ರಾಪ್ತ ಮಕ್ಕಳು ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಬಳಿ ಭಿಕ್ಷಾಟನೆಯಲ್ಲಿ ತೊಡಗಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಮತ್ತು ಮಹಿಳಾ ಮಕ್ಕಳ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ರಕ್ಷಣೆ ಮಾಡಿದ್ದಾರೆ.

ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು 36 ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದುರುಳರು ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ರಸ್ತೆ ಬದಿ ಭಿಕ್ಷಾಟನೆಯಲ್ಲಿ ತೊಡಗಿಸಿದ್ದರು. ಸದ್ಯ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ಪೊಲೀಸರು ಮಕ್ಕಳ ಕಲ್ಯಾಣ ಸಮಿತಿ (CWC) ಸುಪರ್ದಿಗೆ ನೀಡಿದ್ದಾರೆ.

1 ತಿಂಗಳಿಂದ 12 ತಿಂಗಳು ವಯಸ್ಸಿನ 4 ಗಂಡು ಹಾಗೂ 2 ಹೆಣ್ಣು ಸೇರಿದಂತೆ 6 ಮಕ್ಕಳು, 1-3 ವರ್ಷದ ಒಳಗಡೆ ಇರುವ 6 ಗಂಡು ಮತ್ತು 6 ಹೆಣ್ಣು ಸೇರಿದಂತೆ 12 ಮಕ್ಕಳ‌, 3-6 ವರ್ಷ ವಯಸ್ಸಿನ 4 ಹೆಣ್ಣು ಮತ್ತು 2 ಗಂಡು ಸೇರಿದಂತೆ 6 ಮಕ್ಕಳು ಮತ್ತು 6 ವರ್ಷ ಮೇಲ್ಪಟ್ಟ 5 ಹೆಣ್ಣು 18 ಗಂಡು ಸೇರಿದಂತೆ 23 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ: 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ: 2 ವೈದ್ಯರು ಸೇರಿದಂತೆ 9 ಆರೋಪಿಗಳ ಬಂಧನ

ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಡಾಕ್ಟರ್ ರವಿಕುಮಾರ್‌ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. MTP ಕಾಯ್ದೆ ಪರವಾನಗೆ ಪಡೆಯದೇ ಬೇಕಾಬಿಟ್ಟಿಯಾಗಿ ಗರ್ಭಪಾತ ಮಾಡಿಸಲಾಗಿತ್ತು. ಈ ಹಿನ್ನಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಆಸರೆ ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ನೆಲಮಂಗಲ ಟೌನ್ ಠಾಣೆಯಲ್ಲಿ ಡಾ.ರವಿಕುಮಾರ್ ವಿರುದ್ಧ ಮೊಕದ್ದಮೆ ಹೂಡಲಾಗಿತ್ತು. ಜೊತೆಗೆ ಐಪಿಸಿ ಸೆಕ್ಷನ್‌ 312, 313, 315, 316ರಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಲಿಂಗ ಪತ್ತೆ, ಭ್ರೂಣ ಹತ್ಯೆ ನಿಷೇಧ

ಪುರುಷ ಮಹಿಳೆಯರ ಸಮಾಜ ಅನುಪಾತ ಕಾಪಾಡುವ ದಷ್ಠಿಯಿಂದ ಕೇಂದ್ರ ಸರಕಾರ ಹೆರಿಗೆಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ 1994ರಲ್ಲಿ ದುರ್ಬಳಿಕೆ ಮತ್ತು ತಡೆ ಕಾಯಿದೆ ಜಾರಿಗೆ ತಂದಿದೆ. ಭ್ರೂಣಲಿಂಗ ಪತ್ತೆ, ಭ್ರೂಣಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಈ ಕಾಯ್ದೆಯಲ್ಲಿ ನಿಷೇಧಿಸಿದೆ. ಇದನ್ನು ಉಲ್ಲಂಘಿಸಿದಲ್ಲಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಜತೆಗೆ ಹತ್ತು ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ