ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಯತ್ನ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ

ಹುಬ್ಬಳ್ಳಿಯ ನೇಹಾ ಹಿರೇಮಠ್ ಮತ್ತು ರಾಜ್ಯದಲ್ಲಿ ನಡೆದಿರುವ ಇತರ ಕೊಲೆ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕಾನೂನು, ಸುವ್ಯವಸ್ಥೆಯ ನೆಪವೊಡ್ಡಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಪರೋಕ್ಷವಾಗಿ ಯತ್ನಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಹುಬ್ಬಳ್ಳಿಯ ಕೊಲೆ ಪ್ರಕರಣದಲ್ಲಿ ಪೊಲೀಸರು ಅವರ ಕರ್ತವ್ಯ ನಿರ್ವಹಿಸಲಿದ್ದಾರೆ, ಅದಕ್ಕೆ ನಾವು ಅಡ್ಡಿಪಡಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಯತ್ನ: ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ
ಡಿಕೆ ಶಿವಕುಮಾರ್
Follow us
Ganapathi Sharma
|

Updated on:Apr 20, 2024 | 10:08 AM

ಬೆಂಗಳೂರು, ಏಪ್ರಿಲ್ 20: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ (President’s Rule) ಹೇರಲು ಬಿಜೆಪಿ ಗೋಪ್ಯವಾಗಿ ಯೋಜನೆ ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆ ಹಾಗೂ ರಾಜ್ಯದಲ್ಲಿ ಗುರುವಾರ ಒಂದೇ ದಿನ 12ಕ್ಕೂ ಹೆಚ್ಚು ಹತ್ಯೆಗಳಾದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿತ್ತು. ಇದಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೇಹಾ ಹಿರೇಮಠ್​​ರನ್ನು ಫಯಾಜ್ ಚಾಕುವಿನಿಂದ ಇರಿದು ಕೊಂದಿದ್ದ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಅದನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದ ಸಿದ್ದರಾಮಯ್ಯ, ‘ವೈಯಕ್ತಿಕ ಕಾರಣದಿಂದ’ ನೇಹಾ ಕೊಲೆಯಾಗಿದೆ ಎಂದು ಹೇಳಿದ್ದಾರೆ.

ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಲ್ಲ: ಶಿವಕುಮಾರ್

ಈ ಮಧ್ಯೆ, ನೇಹಾ ಹತ್ಯೆಯನ್ನು ಶಿವಕುಮಾರ್ ಸಹ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಯಾರೇ ಕಾನೂನನ್ನು ಕೈಗೆ ತೆಗೆದುಕೊಂಡರೂ ನಾವು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಸರ್ಕಾರ ಬದ್ಧವಾಗಿದೆ. ಯಾರೊಬ್ಬರೂ (ಸರ್ಕಾರದಿಂದ) ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ನಮಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ. ಕರ್ನಾಟಕವು ಅತ್ಯುತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೊಂದಿದೆ. ಬಿಜೆಪಿಯವರು ರಾಷ್ಟ್ರಪತಿ ಆಡಳಿತವನ್ನು ಹೇರಲಿದ್ದೇವೆ ಎಂದು ಪರೋಕ್ಷವಾಗಿ ಮತದಾರರಿಗೆ ಹೇಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಆರ್ ಅಶೋಕ ಗೋಪ್ಯವಾಗಿ ಅದನ್ನೇ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿಯೇ ನಾಟಕ ಮಾಡುತ್ತಿದ್ದಾರೆ. ಆದರೆ ಅವರು ಅದನ್ನು ಮಾಡಲು ಸಾಧ್ಯವಿಲ್ಲ. ಇದು ಅಸಾಧ್ಯ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ‘ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ’: ಧ್ರುವ ಸರ್ಜಾ ಆಕ್ರೋಶ

ಸಿಎಂ ಹೇಳಿಕೆಗೆ ಬಿಜೆಪಿ ತಿರುಗೇಟು

‘ವೈಯಕ್ತಿಕ ಕಾರಣದಿಂದ ನೇಹಾ ಹತ್ಯೆ ನಡೆದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹಳೆಯ ಕಥೆಯನ್ನೇ ಹಲವಾರು ಬಾರಿ ಪುನರಾವರ್ತಿಸಿದ್ದಾರೆ. ಕಾಂಗ್ರೆಸ್ ಯಾರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದೆ? ಸೂಕ್ತ ತನಿಖೆ ನಡೆಸದೆ ಸಿಎಂ ಅವರೇ ಇಂತಹ ಹೇಳಿಕೆ ನೀಡಿದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಯನ್ನು ನಿರೀಕ್ಷಿಸಬಹುದೇ ಎಂದು ವಿಜಯೇಂದ್ರ ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 am, Sat, 20 April 24

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ